ಮುರುಘಾ ಮಠದಲ್ಲಿ ಅಪರಿಚಿತ ಹೆಣ್ಣು ಮಗು ಪತ್ತೆ, ಹಲವು ಅನುಮಾನಗಳು!

ಚಿತ್ರದುರ್ಗ, ಅಕ್ಟೋಬರ್ 14 : ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಮುರುಘಾ ಮಠದ ಶಿವಮೂರ್ತಿ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವ ಸಂದರ್ಭದಲ್ಲಿ ಮಠದ ಅವರಣದಲ್ಲಿರುವ ವಸತಿ ಶಾಲೆಯಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗು ಪತ್ತೆಯಾಗಿದೆ.

ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾದ ಬೆನ್ನಲ್ಲೇ ವಸತಿ ಶಾಲೆಯಲ್ಲಿದ್ದ ಎಲ್ಲಾ ಮಕ್ಕಳನ್ನು ಸರ್ಕಾರಿ ವಸತಿ ಶಾಲೆ, ಬಾಲ ಮಂದಿರಕ್ಕೆ ಶಿಫ್ಟ್‌ ಮಾಡಲಾಗಿತ್ತು. ಅದೇ ಸಂದರ್ಭದಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗು ಪತ್ತೆಯಾಗಿದೆ. ಮಗುವಿನ ಪೋಷಕರ ಬಗ್ಗೆ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಮುರುಘಾ ಮಠದಲ್ಲಿ ಹಲವು ಮಕ್ಕಳನ್ನು ಅನಧಿಕೃತವಾಗಿ ಇರಿಸಿಕೊಂಡಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ದೂರು ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ವಸತಿ ಶಾಲೆಯಲ್ಲಿದ್ದ ಮಕ್ಕಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಇನ್ನೊಂದೆಡೆ ಮಠದ ಆವರಣದಲ್ಲಿರುವ ವಸತಿ ಶಾಲೆಯಲ್ಲಿ ಪತ್ತೆಯಾಗಿರುವ ನಾಲ್ಕು ವರ್ಷದ ಚಿಗುರು ಎಂಬ ಹೆಣ್ಣು ಮಗುವಿನ ಪೋಷಕರ ಪತ್ತೆಗಾಗಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪತ್ರಿಕಾ ಜಾಹೀರಾತು ನೀಡಿದ್ದಾರೆ.

4 Year Unidentified Girl Found in Muruga Mutt

ಪೋಷಕರ ಪತ್ತೆಗೆ ಮನವಿ
ಮುರಘಾ ಮಠದ ಅಕ್ಕಮಹಾದೇವಿ ವಸತಿ ನಿಲಯದಿಂದ ರಕ್ಷಿಸಿ, ಚಿತ್ರದುರ್ಗದ ವಿಶೇಷ ಮಡಿಲು ದತ್ತು ಕೇಂದ್ರದಲ್ಲಿ ಇರಿಸಲಾಗಿದೆ. ಮಗುವಿನ ತಂದೆ ತಾಯಿ ಹಾಗೂ ಸಂಬಂಧಿಕರ ಪತ್ತೆಗಾಗಿ ಪ್ರಕಟಣೆ ಹೊರಡಿಸಲಾಗಿದೆ.

ಬಾಲಕಿಯ ಗುರುತು ಸಿಕ್ಕಲ್ಲಿ ಚಿತ್ರದುರ್ಗದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಅಥವಾ ಅಧ್ಯಕ್ಷರನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ. ಯಾರಿಗಾದರೂ ಬಾಲಕಿಯ ಗುರುತು ಪತ್ತೆಯಾದರೆ 8970072609 ಸಂಪರ್ಕಿಸಬಹುದಾಗಿದೆ.

ಇತ್ತ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಮುರುಘಾ ಶರಣರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಮಠದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+