ಚಿತ್ರದುರ್ಗದಲ್ಲಿ ಮತ್ತೆ 46 ಮಂದಿಗೆ ಕೊರೊನಾ ಸೋಂಕು ದೃಢ
ಚಿತ್ರದುರ್ಗ, ಆಗಸ್ಟ್ 03: ಕೊರೊನಾವೈರಸ್ ಮಹಾಸ್ಫೋಟಕ್ಕೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗುತ್ತಿದೆ. ಭಾನುವಾರವೂ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 5532 ಮಂದಿಗೆ ಕೊರೊನಾ ವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ..
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ ಮತ್ತೆ 46 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 767 ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗದ 45 ವರ್ಷದ ಮಹಿಳೆ ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 03, ಹಿರಿಯೂರು-05, ಚಳ್ಳಕೆರೆ-25, ಹೊಸದುರ್ಗ-03 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 10 ಸೇರಿದಂತೆ ಒಟ್ಟು 46 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಒಟ್ಟು 437 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಇದುವರೆಗೆ 16 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 282 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 469 ಸಕ್ರಿಯ ಪ್ರಕರಣಗಳು ಇವೆ.












Click it and Unblock the Notifications