• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗದಲ್ಲಿ ಕೊರೊನಾ ವೈರಸ್ ಮಹಾಮಾರಿಗೆ ನಾಲ್ಕನೇ ಬಲಿ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಜುಲೈ 19: ಕೋಟೆನಾಡು ಚಿತ್ರದುರ್ಗದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸಾವಿನ ಪ್ರಕರಣಗಳು 4 ಕ್ಕೆ ಏರಿಕೆಯಾಗಿದೆ.

   Congress counsellor ಪ್ರಕಾರ Rum ಕೊರೊನಗೆ ಮುದ್ದು | Oneindia Kannada

   ಚಿತ್ರದುರ್ಗ ನಗರದ ಹೊರಪೇಟೆ ನಿವಾಸಿ 46 ವರ್ಷದ ಮಹಿಳೆ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದಾಳೆ. ಮೃತ ಮಹಿಳೆ ಮಧುಮೇಹ ಹಾಗು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಶನಿವಾರ ಕೊರೊನಾ ಸೋಂಕು ತಪಾಸಣೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.

   ಕೊರೊನಾ ನಿಯಂತ್ರಣ: ದೇವರೆ ನಮ್ಮನ್ನು‌ ಕಾಪಾಡಬೇಕು ಎಂದ ಆರೋಗ್ಯ ಸಚಿವ

   ರಾತ್ರಿ 11ರ ಸುಮಾರಿಗೆ ಬಂದಿದ್ದ ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊರೊನಾ ಸೋಂಕಿತ ಮಹಿಳೆ ಮೃತಪಟ್ಟಿದ್ದಾಳೆ.

   ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಅರ್ಧ ಗಂಟೆಯಲ್ಲಿ ಕೋವಿಡ್-19 ವರದಿ

   ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ. ಇದುವರೆಗೂ 103 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. 93 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಇಂದು ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಕಂಟೈನ್ಮೆಂಟ್ ಝೋನ್ ಗಳನ್ನು ನಿರ್ಮಾಣ ಮಾಡಲಾಗಿದೆ.

   English summary
   Another Death For coronavirus Infection in Chitradurga, is that the number of coronavirus Infected deaths in the district has increased to 4.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X