ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ ಐವರು ವಿದ್ಯಾರ್ಥಿನಿಯರು ಅಸ್ವಸ್ಥ
ಚಿತ್ರದುರ್ಗ, ಸೆಪ್ಟೆಂಬರ್ 30: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹನುಮಂತ ದೇವರ ಕಣಿವೆಯಲ್ಲಿರುವ ಮುರಾರ್ಜಿ ಅಲೆಮಾರಿ ವಸತಿ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಉಪಾಹಾರ ಸೇವಿಸಿದ ಐವರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗಿನ ಉಪಾಹಾರಕ್ಕೆ ಚಿತ್ರಾನ್ನವನ್ನು ಕೊಡಲಾಗಿದೆ. ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ತರಾಗಿದ್ದಾರೆ ಎನ್ನಲಾಗಿದೆ. ಹೊಳಲ್ಕೆರೆ ತಾಲೂಕಿನ ರಾಧಾ, ಬಿಂದು, ಭಾರತಿ ಮತ್ತು ಕಾವ್ಯ ಸೇರಿ ಐವರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಈ ವಿದ್ಯಾರ್ಥಿನಿಯರನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಉಪಾಹಾರ ಸೇವಿಸಿ ವಸತಿ ಶಾಲೆಯ ಐವರು ಅಸ್ವಸ್ಥರಾಗಿರುವ ಸುದ್ದಿ ತಿಳಿದು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.












Click it and Unblock the Notifications