ಚಳ್ಳಕೆರೆಯಲ್ಲಿ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಚಿತ್ರದುರ್ಗ, ನವೆಂಬರ್ 5: ಶಾಲೆಯಲ್ಲಿ ನೀಡಲಾಗುವ ಬಿಸಿಯೂಟ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ಚಳ್ಳಕೆರೆಯ ನಾಯಕನಟ್ಟಿ ಹೋಬಳಿಯ ಚೆನ್ನಬಸವ ಹಟ್ಟಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗೆ ಒಟ್ಟು 148 ವಿದ್ಯಾರ್ಥಿಗಳಿದ್ದಾರೆ. ಮಾಮೂಲಿನಂತೆ ಇಂದು ಮಧ್ಯಾಹ್ನ ಮಕ್ಕಳು ಬಿಸಿಯೂಟ ಸೇವಿಸಿದ್ದಾರೆ.
ಬಿಸಿಯೂಟ ಸೇವಿಸುತ್ತಿದ್ದಂತೆ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಈ ಮಕ್ಕಳನ್ನು ನಾಯಕನಹಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ ಎಂದು ವೈದ್ಯಾಧಿಕಾರಿಗಳಾದ ವಿಕಾಸ್ ಮತ್ತು ನಾಗರಾಜ್ ತಿಳಿಸಿದ್ದು ಘಟನೆ ಬಗ್ಗೆ ನಿಗಾ ವಹಿಸಲಾಗಿದೆ.












Click it and Unblock the Notifications