ಆಸ್ತಿ ಆಸೆಗಾಗಿ ಚಿಕ್ಕಪ್ಪನಿಂದಲೇ ಕೊಲೆಯಾದ 7 ವರ್ಷದ ಬಾಲಕ

ಚಿತ್ರದುರ್ಗ, ಮಾರ್ಚ್ 06: ಆಸ್ತಿಯ ಆಸೆಯಿಂದ ಸ್ವಂತ ಚಿಕ್ಕಪ್ಪನೇ ತನ್ನ ಅಣ್ಣನ ಮಗನಾದ ಏಳು ವರ್ಷದ ಬಾಲಕನನ್ನು ಕೊಲೆ ಮಾಡಿ ಹಳ್ಳಕ್ಕೆ ಬಿಸಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಬೋಸೇದೇವರಹಟ್ಟಿ ಗ್ರಾಮದಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ರಂಗಸ್ವಾಮಿಯ ಪುತ್ರ ಏಳು ವರ್ಷದ ಗೋವಿಂದ್ ತನ್ನ ಸ್ವಂತ ಚಿಕ್ಕಪ್ಪನಿಂದಲೇ ಹತ್ಯೆಯಾದ ದುರ್ದೈವಿಯಾಗಿದ್ದಾನೆ.

ರಂಗಸ್ವಾಮಿ ಸಹೋದರ ಚಿರಂಜೀವಿಯು ಗೋವಿಂದನಿಗೆ ಪಾರಿವಾಳ ತೋರಿಸಿ ಕರೆದೊಯ್ದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಮೃತ ದೇಹವನ್ನು ಗೋಣಿ ಚೀಲದಲ್ಲಿ ಕಟ್ಟಿಕೊಂಡು ಗ್ರಾಮದ ಹೊರವಲಯದ ಹಳ್ಳದಲ್ಲಿ ಬಿಸಾಕಿದ್ದಾನೆ.

7 Year Old Boy Murdered By Uncle In Bosedevarahatti

ಚಿರಂಜೀವಿ ಹಾಗೂ ರಂಗಸ್ವಾಮಿಯ ತಂದೆ ಕೋಪದಲ್ಲಿ ನಿಮಗೆ ಆಸ್ತಿ ಕೊಡುವುದಿಲ್ಲ, ಮೊಮ್ಮಗ ಗೋವಿಂದನ ಹೆಸರಿಗೆ ಬರೆಯುತ್ತೇನೆ ಎಂದಿದ್ದರು, ಹೀಗಾಗಿ ಆಸ್ತಿ ಕೈ ತಪ್ಪುತ್ತದೆ ಎಂಬ ಭಯದಿಂದ ಅಣ್ಣನ ಮಗ ಗೋವಿಂದನನ್ನು ಕೊಲೆ ಮಾಡಿದ್ದಾನೆ ಎಂದು ಗೋವಿಂದ್ ತಂದೆ ರಂಗಸ್ವಾಮಿ ಹೇಳಿದ್ದಾನೆ.

ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿ ಚಿರಂಜೀವಿಯನ್ನು ವಶಕ್ಕೆ ಪಡೆದಿದ್ದಾರೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+