ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿರಿಯೂರು: ದೀಪಾಲಂಕೃತ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ..!

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮೇ.13: ಹಿರಿಯೂರು ನಗರ ಸ್ಟಾರ್ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್, ಚಿತ್ರದುರ್ಗ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್, ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಹಿಂದುಳಿದ ವರ್ಗಗಳ ಮುಖಂಡ ಡಿಟಿ ಶ್ರೀನಿವಾಸ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಡಿ.ಟಿ ಶ್ರೀನಿವಾಸ್ ಸರ್ಕಾರಗಳು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಗ್ರಾಮೀಣ ಭಾಗದಲ್ಲಿನ ಕ್ರೀಡಾ ಪ್ರತಿಭೆಗಳನ್ನು ಗುರುತಿಸುವಂತಹ ಕೆಲಸವಾಗಬೇಕಿದೆ ಎಂದು ಹೇಳಿದರು.

ರಾಜಕಾರಣಿಗಳಲ್ಲಿ ಇಚ್ಛಾಶಕ್ತಿ ಹೊಂದಿದ್ದಾರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸರ್ಕಾರಗಳು ಕ್ರೀಡೆ ಮತ್ತು ಪ್ರವಾಸೋದ್ಯಮಕ್ಕೆ ಮೊದಲ ಆದ್ಯತೆ ನೀಡಬೇಕು. ಜೊತೆಗೆ ರಾಜಕಾರಣಿಗಳು ಕ್ರೀಡೆಗೆ ಹೆಚ್ಚು ಅನುದಾನ ತರುವ ಮೂಲಕ ಇಂತಹ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಂಧಿಗಳನ್ನು ಆಯೋಜಿಸಬೇಕು ಎಂದು ಹೇಳಿದರು. ಇದಕ್ಕೂ ಮೊದಲು ಧ್ವಜಾರೋಹಣ ನೆರವೇರಿಸಿ, ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿದರು.

 7th Federation Cup National Mens and Womens Lighted Ball Badminton Tournament

ಈ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ಕರ್ನಾಟಕ, ಪುದುಚೇರಿ, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಕೇರಳ, ಸೆಂಟ್ರಲ್ ರೈಲ್ವೆ, ಕೆನರಾ ಬ್ಯಾಂಕ್ ತಂಡಗಳು ಸೇರಿದಂತೆ ಮಹಿಳೆಯರ ವಿಭಾಗದಲ್ಲಿ ಕರ್ನಾಟಕ, ತೆಲಂಗಾಣ, ಸೆಂಟ್ರಲ್ ರೈಲ್ವೆ, ಪುದುಚೇರಿ, ಮಹಾರಾಷ್ಟ್ರ, ಕೇರಳ ಸೇರಿದಂತೆ ಒಟ್ಟು 10 ತಂಡಗಳು ಭಾಗವಹಿಸಿದ್ದವು.

 7th Federation Cup National Mens and Womens Lighted Ball Badminton Tournament

Recommended Video

RCB ಸೋತಿದ್ದು, Playoffs ಕನಸಿಗೆ ಬಿದ್ದ ದೊಡ್ಡ ಪೆಟ್ಟು | Oneindia Kannada

ಮೊದಲ ಪುರುಷರ ಪಂದ್ಯ ತಮಿಳುನಾಡು ಹಾಗೂ ಮಹಾರಾಷ್ಟ್ರ ಮಧ್ಯೆ ಸೆಣಸಾಟ ನಡೆಯಿತು. ಈ ಪಂದ್ಯಾವಳಿ ಮೂರು ದಿನಗಳ ಕಾಲ ನಡೆಯಲಿದೆ. ಇದೇ ಸಂದರ್ಭದಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಕೆ.ಪರುಶುರಾಮ, ಡಿವೈಎಸ್ಪಿ ರೋಷನ್ ಜಮೀರ್, ನಗರಸಭೆ ಅಧ್ಯಕ್ಷೆ ಶಂಶುನ್ನೀಸಾ, ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಂಸ್ಥಾಪಕ ಶಕೀಲ್ ನವಾಜ್, ಎ.ಮಂಜುನಾಥ್ ಕಿರ್ಲೋಸ್ಕರ್ ಕಂಪನಿ ಮ್ಯಾನೇಜರ್ ಗುಮಸ್ತೆ ಸೇರಿದಂತೆ ಅನೇಕ ಗಣ್ಯರು ಹಾಗೂ ಕ್ರೀಡಾಪಟುಗಳು ಭಾಗವಹಿಸಿದ್ದರು.

English summary
7th Federation Cup National Men's and Women's Lighted Ball Badminton Tournament in hiriyuru, DT Srinivas, the leader of the backward classes who led the illuminated National Ball Badminton Tournament,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X