ಚಿತ್ರದುರ್ಗ : ಭೀಕರ ಅಪಘಾತ, 7 ವಿದ್ಯಾರ್ಥಿನಿಯರು ಸಾವು

Posted By:
Subscribe to Oneindia Kannada

ಚಿತ್ರದುರ್ಗ, ಏಪ್ರಿಲ್ 30 : ಚಿತ್ರದುರ್ಗದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 5ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟ್ ಬಳಿ ಶನಿವಾರ ಮುಂಜಾನೆ ಈ ಅಪಘಾತ ನಡೆದಿದೆ. ಬಳ್ಳಾರಿಯತ್ತ ತೆರಳುತ್ತಿದ್ದ ಕ್ರೂಸರ್ ವಾಹನ ಮತ್ತು ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. [ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]

road accident

ಅಪಘಾತದ ರಭಸಕ್ಕೆ ಕ್ರೂಸರ್ ಚಾಲಕ ಚಂದ್ರೇಗೌಡ ಮತ್ತು 7 ವಿದ್ಯಾರ್ಥಿನಿಯರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಅಪಘಾತದಲ್ಲಿ 5ಕ್ಕೂ ಅಧಿಕ ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. [ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಕ್ರಾಸ್ ಪ್ರಯಾಣಿಕರ ಯಮಪಾಶ]

ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ಕ್ರೂಸರ್ ಚಾಲಕ ನಿದ್ದೆ ಮಂಪರಿನಲ್ಲಿ ಇದ್ದದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಕ್ರೂಸರ್‌ನಲ್ಲಿದ್ದ ಎಲ್ಲರೂ ಬಳ್ಳರಿ ಮೂಲದವರಾಗಿದ್ದು, ಬೆಂಗಳೂರಿಗೆ ಸಂದರ್ಶನಕ್ಕೆಂದು ಬಂದಿದ್ದರು. [ಅಪಘಾತವಾದಾಗ ಜೀವ ಉಳಿಸಲು ನೆರವಾಗಿ]

ಮೃತರು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಿಸಿಎಂ ವಿದ್ಯಾರ್ಥಿನಿಯರ ಹಾಸ್ಟೆಲ್ ವಿದ್ಯಾರ್ಥಿಗಳು. ಮೃತಪಟ್ಟವರನ್ನು ಜಯಶ್ರೀ, ಸುನಿತಾ, ಶಾಂತಿ, ಶ್ವೇತಾ, ಶ್ರುತಿ ಎಂದು ಗುರುತಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
8 people died on the spot and several others injured in a road accident near Challakere, Chitradurga district on April 30, 2016 early morning.
Please Wait while comments are loading...