ಹಿರಿಯೂರು: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು
ಹಿರಿಯೂರು, ಮೇ, 28: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಸೇತುವೆಗೆ ಡಿಕ್ಕಿಯಾದ ರಭಸಕ್ಕೆ ಇಬ್ಬರು ಮೃತಪಟ್ಟಿ ಘಟನೆ ತಾಲೂಕಿನ ಯರಬಹಳ್ಳಿ ಸಮೀಪ ನಡೆದಿದೆ.
ನಾಗರಾಜ್ ಶೆಟ್ಟಿ (55) ಹಾಗೂ ವಿಶಾಲಾಕ್ಷಮ್ಮ (75) ಮೃತ ದುರ್ದೈವಿಗಳು. ಮೃತಪಟ್ಟ ಇಬ್ಬರು ತುಮಕೂರು ಮೂಲದವರು ಎಂದು ತಿಳಿದುಬಂದಿದೆ.

ಮೃತ ನಾಗರಾಜ್ ಶೆಟ್ಟಿ ಮಗಳನ್ನು ಶಾಲೆಗೆ ಬಿಟ್ಟು ಬರಲು ತುಮಕೂರಿಗೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗಳು ಬಿಂದು, ಪತ್ನಿ ಭಾಗ್ಯಲಕ್ಷ್ಮಿ, ಸಂಬಂಧಿ ಗೀತಾಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಗೊಂಡವರನ್ನು ಹಿರಿಯೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಪ್ರಕರಣ ಐಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದ.
ಅಪರಿಚಿತ ವ್ಯಕ್ತಿ ಸಾವು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲ್ಲೂಕಿನ ಆದಿವಾಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಮೃತನ ದೇಹ ನಜ್ಜುಗುಜ್ಜಾಗಿದ್ದು, ಗುರುತು ಪತ್ತೆಯಾಗಿಲ್ಲ. ಇನ್ನು ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಎರಡು ಲಾರಿಗಳಲ್ಲಿ ಆಕಸ್ಮಿಕ ಬೆಂಕಿ: ಪ್ರತ್ಯೇಕ ಘಟನೆಯಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ಎರಡು ಲಾರಿಯ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು ಹೋದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ.
ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬೆಂಗಳೂರು ರಸ್ತೆಯ ಸ್ವಾಮಿಯಪ್ಪ ಹೋಟೆಲ್ ಬಳಿ ರಸ್ತೆಯ ಪಕ್ಕದಲ್ಲಿ ತಮಿಳುನಾಡು ನಂಬರ್‌ನ ಲಾರಿಯ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದಿದೆ. ಇದಲ್ಲದೆ ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿಯ ಡಾಬಾ ಹೋಟೆಲ್ ಬಳಿ ನಿಲ್ಲಿಸಿದ್ದ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಮುಂಭಾಗದಲ್ಲಿ ಸುಟ್ಟು ಕರಕಲಾಗಿದೆ.
ಇನ್ನು ಸ್ಥಳೀಯರ ಮಾಹಿತಿ ಮೇರೆಗೆ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.












Click it and Unblock the Notifications