ಚಿತ್ರದುರ್ಗದಲ್ಲಿ ಭಾರೀ ಮಳೆಯಿಂದ ಬೆಳೆಹಾನಿಯಾದ ರೈತರ ಪಟ್ಟಿ ಪ್ರಕಟ: ಇಲ್ಲಿದೆ ವಿವರ

ಚಿತ್ರದುರ್ಗ, ನವೆಂಬರ್‌ 06: ಕಳೆದ ಅಕ್ಟೋಬರ್ ತಿಂಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲೂಕುಗಳಲ್ಲಿ ಬೆಳೆಹಾನಿಯಾದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಒಂದೇ ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ 1,156.25 ಹೆಕ್ಟೇರ್ ಬೆಳೆಹಾನಿಯಾಗಿರುವುದು ತಿಳಿದು ಬಂದಿದೆ.

ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲೂಕುಗಳಲ್ಲಿ ಕಳೆದ ಅಕ್ಟೋಬರ್‌ನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಉಂಟಾದ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷಾ ತಂಡವು ಸ್ಥಳ ಪರಿಶೀಲನೆ ನಡೆಸಿ, ಬೆಳೆ ಹಾನಿ ಕ್ಷೇತ್ರಗಳ ಮಾಹಿತಿ ನೀಡಿದೆ.

A List Of Farmers Published Whose Crops Were Damaged Due To Heavy Rains In Chitradurga

ಜಿಲ್ಲೆಯಲ್ಲಿ ಒಟ್ಟು 914.45 ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80 ತೋಟಗಾರಿಕೆ ಬೆಳೆ ಸೇರಿ ಒಟ್ಟು 1,156.25 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಚಿತ್ರದುರ್ಗ ತಾಲೂಕುಗಳಲ್ಲಿ 172.77 ಹೆಕ್ಟೇರ್ ಕೃಷಿ, 94.50 ತೋಟಗಾರಿಕೆ ಸೇರಿ 267.27 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 478.47 ಹೆಕ್ಟೇರ್ ಕೃಷಿ ಬೆಳೆ, 89.40 ಹೆಕ್ಟೇರ್ ತೋಟಗಾರಿಕೆ ಸೇರಿ 567.87 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 162.50 ಹೆಕ್ಟೇರ್ ಕೃಷಿ, 35 ಹೆಕ್ಟೇರ್ ತೋಟಗಾರಿಕೆ ಬೆಳೆ ಸೇರಿ 197.50 ಹೆಕ್ಟೇರ್ ಹಾನಿಯಾಗಿದೆ ಎಂದು ವರದಿಯಾಗಿದೆ.

ಮೊಳಕಾಲ್ಮೂರು ತಾಲೂಕುಗಳಲ್ಲಿ 100.71 ಹೆಕ್ಟೇರ್ ಕೃಷಿ ಬೆಳೆ ಹಾಗೂ 22.90 ಹೆಕ್ಟೇರ್ ತೊಟಗಾರಿಕೆ ಬೆಳೆ ಸೇರಿ 123.61 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎನ್ನುವ ವರದಿ ಹೊರ ಬಿದ್ದಿದೆ.

ಇನ್ನು ಬೆಳೆಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕರಿಗಳ ಕಚೇರಿ ಸೇರಿದಂತೆ ಆಯಾ ತಾಲೂಕು ತಹಶೀಲ್ದಾರ್ ಕಚೇರಿ, ಗ್ರಾಮ ಪಂಚಾಯತಿ ಕಚೇರಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಬುಧವಾರದಂದು ಪ್ರಕಟಿಸಲಾಗಿದೆ.

ಈ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ, ಸಂಬಂಧಪಟ್ಟ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆಯ ಕಚೇರಿಗಳಿಗೆ 7 ದಿನಗಳೊಳಗಾಗಿ ಸಲ್ಲಿಸಬಹುದು. ಈ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದರೆ ಪಟ್ಟಿಯನ್ನು ಅಂತಿಮಗೊಳಿಸಿ ನಿಯಮಾನುಸಾರ ಪರಿಹಾರ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+