ಚಳ್ಳಕೆರೆ: ತಹಶೀಲ್ದಾರ್ ಕಾರಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ-ಮುಂದೇನಾಯ್ತು?
ಚಿತ್ರದುರ್ಗ, ಸೆಪ್ಟೆಂಬರ್, 05: ತಾಲ್ಲೂಕು ದಂಡಾಧಿಕಾರಿಗಳ ವಾಹನಕ್ಕೆ ಪೃಥ್ವಿರಾಜ್ ಎಂಬ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹುಚ್ಚಾಟ ಮೆರೆದ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ. ಹಾಗಾದರೆ ಇದಕ್ಕೆ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಇತ್ತೀಚೆಗಷ್ಟೇ ಬೆಂಗಳೂರಿನ ವಿಧಾನಸೌಧದ ಮುಂದೆ ತನ್ನ ಬೈಕ್‌ಗೆ ತಾನೇ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದು, ಇದೀಗ ಚಳ್ಳಕೆರೆಯಲ್ಲೂ ಇಂಥದೊಂದು ಹುಚ್ಚಾಟ ಮೆರೆದಿದ್ದಾನೆ.
ತಹಶೀಲ್ದಾರ್ ಅವರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ, ಕಚೇರಿ ಮುಂದೆ ಕಾರು ನಿಲ್ಲಿಸಿದ್ದರು. ತಹಶೀಲ್ದಾರ್ ಅವರು ಒಳಗಡೆ ಹೋದ ಕೆಲವೇ ಕ್ಷಣಗಳಲ್ಲಿ ಏಕಾಯಕಿ ಪೃಥ್ವಿರಾಜ್ ಸರ್ಕಾರಿ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಬಹು ದೊಡ್ಡ ಅನಾಹುತ ತಪ್ಪಿದೆ. ಇನ್ನು ಬೆಂಕಿ ತಗುಲಿದ ತಹಶೀಲ್ದಾರ್ ವಾಹನದ ಮುಂಭಾಗ ಸ್ವಲ್ಪ ಕಪ್ಪು ಆಗಿದೆ. ಬಳಿಕ ಸ್ಥಳಕ್ಕೆ ಆಗಮಿಸಿದ ಚಳ್ಳಕೆರೆ ಪೊಲೀಸರು ಪೃಥ್ವಿರಾಜ್‌ನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
1 ಕೋಟಿ 27ಲಕ್ಷ ರೂಪಾಯಿ ವಂಚನೆ: ಸೈಬರ್ ವಂಚಕರು ಸಾಮಾನ್ಯ ಜನರನ್ನು ಬಲಿಪಶುಗಳಾಗಿಸಿಕೊಂಡು ಆನ್‌ಲೈನ್ ಮೂಲಕ ಆಸೆ, ಆಮಿಷಗಳನ್ನೊಡ್ಡಿ ಹಣ ದೋಚಿರುವ ಪ್ರಕರಣಗಳು ದಾಖಲಾದ ಉದಾಹರಣೆಗಳಿವೆ. ಆದರೆ ಇದೀಗ, TRAI & ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿದ್ದ ಸೈಬರ್ ವಂಚಕರು ಹಿರಿಯ ವೈದ್ಯರೊಬ್ಬರ ಬಳಿ 1 ಕೋಟಿ 27ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಸೈಬರ್ ವಂಚಕರು ಚಿತ್ರದುರ್ಗದ ಹಿರಿಯ ವೈದ್ಯ ಶ್ರೀನಿವಾಸ್ ಶೆಟ್ಟಿಗೆ 1 ಕೋಟಿ 27 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ. ಹಾಗಾದರೆ ಇದು ಹೇಗೆ ಸಾಧ್ಯ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
TRAI & ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿ ನಿಮ್ಮ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ವಾಟ್ಸಪ್ ಕಾಲ್ & ನಾರ್ಮಲ್ ಕಾಲ್ ಮಾಡಿ ನಂಬಿಸಿ ದಾಖಲೆ ಕೇಳಿದ್ದಾರೆ. ಬಳಿಕ ಅವರ ಖಾತೆಗೆ 1 ಕೋಟಿ 27 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಹಿರಿಯ ವೈದ್ಯ ಶ್ರೀನಿವಾಸ್ ಶೆಟ್ಟಿ ಚಿತ್ರದುರ್ಗದ CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications