ಚಳ್ಳಕೆರೆ: ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಖಾಸಗಿ ಬಸ್ ಪಲ್ಟಿ
ಚಿತ್ರದುರ್ಗ, ನವೆಂಬರ್, 10: ಚಲಿಸುತ್ತಿದ್ದ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಈ ಘಟನೆ ಭಾನುವಾರ (ನವೆಂಬರ್ 10) ಬೆಳಗ್ಗೆ ಚಳ್ಳಕೆರೆ ತಾಲ್ಲೂಕಿನ ಬಾಹುಬಲಿ ಫ್ಯಾಮಿಲಿ ಡಾಬಾ ಸಮೀಪದ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಇನ್ನು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಳಕಾಲ್ಮೂರಿನಿಂದ ಚಳ್ಳಕೆರೆ ಕಡೆಗೆ ಬರುವಾಗ ಈ ಘಟನೆ ನಡೆದಿದೆ. ಇದನ್ನು ಮಂಜುನಾಥ ಖಾಸಗಿ ಬಸ್ ಎಂದು ಗುರುತಿಸಲಾಗಿದೆ. ಬಸ್ ಚಾಲಕನ ಅಜಾಗರೂಕತೆಯೇ ಈ ಘಟನೆಗೆ ಕಾರಣ ಎನ್ನಲಾಗಿದೆ.

ಚಾಲಕ ಜೂಜಾಟ ಪಾರಿವಾಳ ತುಂಬಿದ ಬಾಕ್ಸ್ ಪಕ್ಕದಲ್ಲಿ ಇಟ್ಟುಕೊಂಡು ಬಸ್ ಚಾಲನೆ ಮಾಡುತ್ತಿದ್ದನು ಎನ್ನಲಾಗಿದ್ದು, ಬಾಕ್ಸ್‌ನಿಂದ ಪಾರಿವಾಳ ಹೊರಗೆ ಬರಲು ಯತ್ನಿಸಿದೆ. ಆಗ ಅದನ್ನು ಚಾಲಕ ಹಿಡಿಯಲು ಮುಂದಾಗಿದ್ದರಿಂದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಭವಿಸಿಲ್ಲ. ಇನ್ನು ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಕ್ ಸವಾರ ಸಾವು: ದೊಡ್ಡ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಣ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಇನ್ನೂ ಡಿಕ್ಕಿ ಹೊಡೆದ ವಾಹನ ಚಾಲಕ ಪರಾರಿರಿ ಆಗಿದ್ದಾನೆ ಎಂದು ತಿಳಿದುಬಂದಿದೆ.
ಬೈಕ್ ಸವಾರ ತುಮಕೂರು ಮೂಲದ ಗಿರೀಶ(36) ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಈ ಅಪಘಾತ ಸಂಭವಿಸಿದೆ. ಇನ್ನು ಅಪಘಾತ ಮಾಡಿದ ಸವಾರ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಈ ಪ್ರಕರಣ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ವೀರನಪುರ ಕ್ರಾಸ್ ಸಮೀಪ ನಡೆದಿದೆ.
ಚಾಮರಾಜನಗರದ ನಿವಾಸಿ ಅಲೀಂ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೆರಕಣಾಂಬಿಯತ್ತ ತೆರಳುತ್ತಿದ್ದ ಅಲೀಂಗೆ ಚಾಮರಾಜನಗರದತ್ತ ಬರುತ್ತಿದ್ದ ರಂಗನಾಥ ಖಾಸಗಿ ಬಸ್ ಮುಖಾ-ಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಚಾಮರಾಜನಗರ ಟ್ರಾಫಿಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಎರಡು ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications