ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿಗೆ ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಡಿಕ್ಕಿ- ಓರ್ವ ಮಹಿಳೆ ಸಾವು

ಚಿತ್ರದುರ್ಗ, ಆಗಸ್ಟ್‌, 27: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆಂಬುಲೆನ್ಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಳೆಕಟ್ಟೆ ಬಳಿ ನಡೆದಿದೆ. ಹಾಗಾದರೆ ಮೃತರ ವಾಸ ಸ್ಥಳ ಯಾವುದು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಹಾವೇರಿ ಮೂಲದ ಶಿವಬಸವ (50) ಅವರ ಶವವನ್ನು ಬೆಂಗಳೂರಿನಿಂದ ಆಂಬುಲೆನ್ಸ್‌ನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಆಂಬುಲೆನ್ಸ್‌ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೃತ ಸಂಬಂಧಿ ಸರೋಜಮ್ಮ (52) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

A woman death after lorry hit to ambulance on National Highway 4 near chitradurga

ಇನ್ನು ಮೃತ ಶವವನ್ನು ಅಂಬುಲೆನ್ಸ್ ಮೂಲಕ ಹಾವೇರಿಗೆ ಕೊಂಡೊಯ್ಯುವಾಗ ಈ ಘಟನೆ ನಡೆದಿದೆ. ಲಾರಿಗೆ ಆಂಬುಲೆನ್ಸ್‌ ಡಿಕ್ಕಿ ಹೊಡೆದ ರಭಸಕ್ಕೆ ಮೃತನ ಸಂಬಂಧಿ ಸರೋಜಮ್ಮ 52 ವರ್ಷ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಚಿತ್ರದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಳಿಕ ಸ್ಥಳೀಯ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ ಎನ್ನಲಾಗಿದೆ.

ರಸ್ತೆ ಅಪಘಾತದಲ್ಲಿ 140 ಮಂದಿ ಬಲಿ: ಚಾಮರಾಜನಗರದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಹೆಲ್ಮೆಟ್‌ ಹಾಕದೇ ಬೈಕ್ ಸವಾರರು ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ. ಹಾಗಾದರೆ 2024ರ ಜನವರಿ ತಿಂಗಳಿನಿಂದ ಇಲ್ಲಿವರೆಗೂ ಹೆಲ್ಮೆಟ್‌ ಇಲ್ಲದೆ ಪ್ರಯಾಣ ಮಾಡಿ ಮೃತಪಟ್ಟವರ ಸಂಖ್ಯೆ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಜನವರಿಯಿಂದ ಜುಲೈ ತನಕ 134 ಮಂದಿ ಅಸುನೀಗಿದ್ದು, ಆಗಸ್ಟ್‌ವರೆಗೆ ಇದರ ಸಂಖ್ಯೆ 140 ದಾಟಿದೆ‌‌. ಜುಲೈ ತಿಂಗಳಲ್ಲಿ 22 ಮಂದಿ ರಸ್ತೆ ಅಪಘಾತದಲ್ಲಿ ಅಸುನೀಗಿದ್ದು, ಇವರಲ್ಲಿ 15 ಮಂದಿ ಅಪಘಾತದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೇ ಇದ್ದದ್ದು ಕಂಡುಬಂದಿದೆ.

ರಾಷ್ಟ್ರೀಯ ಹೆದ್ದಾರಿ ಮತ್ತು ಬೈಪಾಸ್ ರಸ್ತೆ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿರುವುದರಿಂದ ಅತಿವೇಗದ ಬೈಕ್ ಚಾಲನೆ ಹೆಚ್ಚಾಗುತ್ತಿದೆ. ಜೊತೆಗೆ, ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡಿ ನಿರ್ಲಕ್ಷ್ಯ ತೋರುತ್ತಿರುವುದರಿಂದ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ.

ರಸ್ತೆ ಅಪಘಾತದಲ್ಲಿ ನೂರಾರು ಮಂದಿ ಜೀವ ಕಳೆದುಕೊಂಡಿರುವ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಪ್ರತಿಕ್ರಿಯಿಸಿದ್ದು, ಅತಿವೇಗದ ಚಾಲನೆ ಮತ್ತು ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುವ ಮೂಲಕ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ.

ಈ ಬಗ್ಗೆ, ಈಗಾಗಲೇ ಎಲ್ಲಾ ಠಾಣೆಗಳಲ್ಲೂ ಸಂಚಾರಿ ನಿಯಮ ಜಾಗೃತಿ ಮೂಡಿಸಲಾಗುತ್ತಿದ್ದು, ದಂಡ ಕಟ್ಟಿಸುವ ಬದಲು ಹೆಲ್ಮೆಟ್ ಖರೀದಿಸಿ ತಂದು ಬೈಕ್ ತೆಗೆದುಕೊಂಡು ಹೋಗುವಂತೆ ಅರಿವು ಮೂಡಿಸಲಾಗುತ್ತಿದೆ. ಅತೀ ಹೆಚ್ಚು ಅಪಘಾತದಲ್ಲಿ ಹೆಲ್ಮೆಟ್ ಧರಿಸದೇ ಪ್ರಾಣ ಕಳೆದುಕೊಂಡವರು ಬಹಳಷ್ಟು ಮಂದಿ ಇದ್ದು, ಅವರು ಹೆಲ್ಮೆಟ್ ಧರಿಸಿದ್ದರೇ ಪಾರಾಗುವ ಸಾಧ್ಯತೆ ಹೆಚ್ಚಿರುತ್ತಿತ್ತು ಎಂದರು.

ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗದ ಚಾಲನೆ ಕಂಡುಬರುತ್ತಿದ್ದ ಹಿನ್ನೆಲೆ ಸ್ಪೀಡ್ ಲೇಸರ್ ಗನ್ ಮೂಲಕ ಅತಿವೇಗ ಚಾಲನೆ ಮಾಡಿದವರಿಗೆ ದಂಡ ಹಾಕಲಾಗುತ್ತಿದೆ. ಅಲ್ಲದೆ, ಬೈಕ್ ಸವಾರರು ಮತ್ತು ಹಿಂಬದಿ ಸವಾರರು ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+