ಹೊಳಲ್ಕೆರೆ: ರೈಲು ಡಿಕ್ಕಿಯಾಗಿ ಯುವಕ ಸಾವು
ಚಿತ್ರದುರ್ಗ, ಸೆಪ್ಟೆಂಬರ್, 25: ಇತ್ತೀಚೆಗೆ ಅಪಘಾತ ಪ್ರಕರಣಗಳು ಮತ್ತೆ ಹೆಚ್ಚಾಗಿವೆ. ಇದರ ನಡುವೆಯೇ ಇದೀಗ ಗಣೇಶ ಮೂರ್ತಿ ವಿಸರ್ಜನೆ ಮಾಡಿ, ವಾಪಸ್ ಬರುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಂದವಾಡಿ ಸಮೀಪದಲ್ಲಿ ಈ ಘಟನೆ ಜರುಗಿದೆ. ಮೃತ ಯುವಕನನ್ನ 24 ವರ್ಷದ ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದೆ.
ಗಣೇಶನ ವಿಸರ್ಜನೆ ಮುಗಿಸಿ, ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ರೈಲ್ವೆ ಹಳಿ ದಾಟುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಇನ್ನು ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಚಿಕ್ಕಜಾಜೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಓರ್ವ ಸಾವು: ಮುಂದೆ ಚಲಿಸುತ್ತಿದ್ದ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿಯಾದ ರಭಸಕ್ಕೆ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜವನಗೊಂಡನಹಳ್ಳಿ ರಾಷ್ಟ್ರೀಯ ಹೆದ್ದಾರಿ 4ಲ್ಲಿ ಮಂಗಳವಾರ (ಸೆಪ್ಟೆಂಬರ್ 24) ಸಂಜೆ ನಡೆದಿದೆ.
ಮೃತ ಲಾರಿ ಚಾಲಕ ಹಾಗೂ ಗಾಯಾಳು ಗುರುತು ಪತ್ತೆಯಾಗಿಲ್ಲ. ಇನ್ನು ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ರಭಸಕ್ಕೆ ಟ್ರಕ್ ಲಾರಿ ಚಾಲಕನ ಮೃತದೇಹ ಲಾರಿಯಲ್ಲಿ ಸಿಕ್ಕಾಕ್ಕಿಕೊಂಡಿದ್ದು, ಮೃತ ದೇಹವನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು.
ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟ್ರಕ್ ಲಾರಿ ಚಾಲಕನ ಅಜಾಗರೂಕತೆಯೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಅಪಘಾತದ ಹಿನ್ನೆಲೆ ಸ್ವಲ್ಪ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಅಪಾಯಾದಿಂದ ಬಚ್ಚಾವಾದ ಪ್ರಯಾಣಿಕರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಪರಿಣಾಮವಾಗಿ ಸರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಬುಧವಾರ (ಸೆಪ್ಟೆಂಬರ್ 25) ಬೆಳಗ್ಗೆ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಬಂಧ ಇಲ್ಲ. ಆದರೆ, ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.












Click it and Unblock the Notifications