ಚಿತ್ರದುರ್ಗ: ಸಾರಿಗೆ ಇನ್ಸ್ ಪೆಕ್ಟರ್ ಮನೆ ಮೇಲೆ ಎಸಿಬಿ ದಾಳಿ
ಚಿತ್ರದುರ್ಗ, ಫೆಬ್ರವರಿ 28 : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ಚಿತ್ರದುರ್ಗ ಜಿಲ್ಲೆಯ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇಲೆ ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿರುವ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಕರುಣಾಕರ್ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.[ಬೀದರ್: ತಾಲೂಕು ಪಂಚಾಯಿತಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ]

ಕರುಣಾಕರ್ ಮೂಲತಃ ಶಿವವೊಗ್ಗ ಜಿಲ್ಲೆಯವರಾಗಿದ್ದರಿಂದ ಶಿವವೊಗ್ಗದಲ್ಲಿರುವ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ಅಕ್ರಮ ಆಸ್ತಿ, ನಗದು, ಚಿನ್ನಾಭರಣ ಮತ್ತು ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳವಾರ ಬೆಳಗ್ಗೆ ಬೆಳಗಾವಿ, ಚಿತ್ರದುರ್ಗ, ಹುಬ್ಬಳ್ಳಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಿತಿ ಮೀರಿ ಆದಾಯ ಹೊಂದಿರುವವರ ಮೆನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.












Click it and Unblock the Notifications