ಚಿತ್ರದುರ್ಗ: ವಲಯ ಅರಣ್ಯಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ
ಚಿತ್ರದುರ್ಗ, ಜುಲೈ 11: ಚಿತ್ರದುರ್ಗದಲ್ಲಿ ಬಧವಾರ ಬೆಳ್ಳಂಬೆಳಗ್ಗೆ ACB ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾವಣಗೆರೆ ಜಿಲ್ಲೆಯ ಜಗಳೂರು ವಲಯ ಅರಣ್ಯ ಅಧಿಕಾರಿ ರಾಮಮೂರ್ತಿ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಚಿತ್ರದುರ್ಗದ ಕೋಟೆ ರಸ್ತೆಯಲ್ಲಿರುವ ಮನೆ, ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿನ ಕಚೇರಿಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಅಲ್ಲದೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಭಕ್ತನಕಟ್ಟೆ ಗ್ರಾಮದಲ್ಲಿರುವ RFO ರಾಮಮೂರ್ತಿ ಅವರ ಮಾವ ಕೆಂಚಪ್ಪ ಒಡೆತನದ ಮನೆ ಹಾಗೂ ತೋಟದಲ್ಲಿಯೂ ಅಧಿಕಾರಿಗಳು ಏಕಕಾಲದಲ್ಲಿ ಪರಿಶೀಲನೆ ನಡೆಸಿದ್ದಾರೆ.

ರಾಮಮೂರ್ತಿ ಅವರು ಆದಾಯ ಮೀರಿ ಆಸ್ತಿ ಗಳಿಕೆ ಹೊಂದಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಎಸಿಬಿ ಡಿವೈಎಸ್ಪಿ ಜಿ.ಮಂಜುನಾಥ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.












Click it and Unblock the Notifications