ಚಿತ್ರದುರ್ಗ: ಗ್ಯಾಸ್‌ ಟ್ಯಾಂಕರ್ ಲಾರಿ ಮತ್ತು ಕಾರಿನ ನಡುವೆ ಅಪಘಾತ, ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವು

ಚಿತ್ರದುರ್ಗ, ಜನವರಿ, 19: ಗ್ಯಾಸ್‌ ಟ್ಯಾಂಕರ್ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ಮೂಲದ ವಿನುತಾ (40) ನಿರ್ಮಲಾ (55), ಮೃತ ಮಹಿಳೆಯರು ಎಂದು ಗುರುತಿಸಲಾಗಿದೆ. ಅಲ್ಲದೆ ಘಟನೆಯಲ್ಲಿ ಫಣಿರಾಜ್, ರಶ್ಮಿ, ಯಶಸ್ ಎಂಬ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Accident between gas tanker lorry and car near Madakaripura, two death

ಬೆಂಗಳೂರಿನಿಂದ ಕಾರಿನಲ್ಲಿ ಹೊಸಪೇಟೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎನ್ನಲಾಗಿದೆ.

ಭೀಕರ ಅಪಘಾತದಲ್ಲಿ ಮೂವರ ಸಾವು

ಇನ್ನು ಸಂಕ್ರಾತಿ ಹಬ್ಬದ ಸಡಗರದ ನಡುವೆ ಜವರಾಯ ಅಟ್ಟಹಾಸ ಮೆರೆದಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದ್ದು, ಒಂದೇ ಕುಟುಂಬದ ಮೂವರು ಅಸುನೀಗಿದ್ದರು.

ಕೊಳ್ಳೇಗಾಲ ಪಾಳ್ಯ ಗ್ರಾಮದ ಸಂತೋಷ (32), ಸೌಮ್ಯ(27) ಹಾಗೂ ಸಾಕ್ಷಿ(4) ಮೃತಪಟ್ಟ ದುರ್ದೈವಿಗಳಾಗಿದ್ದು, ಅಭಿ ಎಂಬ ಮತ್ತೊಂದು ಮಗು ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಅಪಘಾತ ಸಂಭವಿಸಿದ್ದೇಗೆ?: ಹಬ್ಬಕ್ಕೆಂದು ಬಟ್ಟೆ ತರಲು ಕೊಳ್ಳೇಗಾಲಕ್ಕೆ ಸಂತೋಷ್ ಕುಟುಂಬ ಬೈಕ್‌ನಲ್ಲಿ ತೆರಳುತ್ತಿದ್ದಾಗ ಜಿನಕನಹಳ್ಳಿ ಸಮೀಪ ಭತ್ತ ಕತ್ತರಿಸುವ ಯಂತ್ರ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ನಿಂದ ನಾಲ್ವರು ಕೆಳಕ್ಕೆ ಬಿದ್ದಿದ್ದು, ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+