ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಇನೋವಾ & ಫಾರ್ಚೂನರ್ ಕಾರಿನ ನಡುವೆ ಅಪಘಾತ; 8 ಮಂದಿಗೆ ಗಾಯ

ಚಿತ್ರದುರ್ಗ, ನವೆಂಬರ್, 25: ಚಿತ್ರದುರ್ಗದ ಮೇಲೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲಿದ್ದವು. ಇದೀಗ ಇಂದು (ನವೆಂಬರ್ 25) ನಗರದ ಹೊರವಲಯದ ಗುಡ್ಡದ ರಂಗವ್ವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಇನೋವಾ ಕಾರು-ಫಾರ್ಚುನರ್ ಅಪಘಾತ ಸಂಭವಿಸಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಚಿತ್ರದುರ್ಗ ತಾಲ್ಲೂಕಿನ ಗುಡ್ಡದ ರಂಗವ್ವಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ಒಂದೇ ಕುಟುಂಬದ 8 ಜನ ಗಾಯಗೊಂಡಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Accident Between Innova and Fortuner Cars on National Highway 13 8 people injured

ರಾಯಚೂರು ಜಿಲ್ಲೆಯ ಮಂತ್ರಾಲಯ ದೇವರ ದರ್ಶನಕ್ಕೆ ತೆರಳಿ ದರ್ಶನ ಪಡೆದು ವಾಪಾಸ್ ದಾಬಸ್ ಪೇಟೆಗೆ ತೆರಳುತ್ತಿದ್ದ ವೇಳೆ ಚಿತ್ರದುರ್ಗ ಬಳಿ ಅಪಘಾತ ಸಂಭವಿಸಿದೆ‌. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ . ಚಿತ್ರದುರ್ಗ-ಹೊಸಪೇಟೆ ಹೈವೆಯಲ್ಲಿ ಯೂಟರ್ನ್ ಮಾಡುವಾಗ ಈ ಅಪಘಾತ ಸಂಭವಿಸಿದೆ.

ಫಾರ್ಚುನರ್ ಡಿಕ್ಕಿ ಹೊಡೆದ ರಭಸಕ್ಕೆ ಇನೋವಾ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾರು ಪಲ್ಟಿಯಾಗಿ ಮಗು ಸಾವು: ಮದುವೆ ಮುಗಿಸಿಕೊಂಡು ವಾಪಸ್ ಹೋಗುವಾಗ ಕಾರು ಪಲ್ಟಿಯಾಗಿ ಓರ್ವ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.

ಚಳ್ಳಕೆರೆ ತಾಲೂಕಿನ ವೀರದೀಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಹೋಗುವಾಗ ಬೈಕ್ ಸವಾರ ಅಡ್ಡ ಬಂದಿದ್ದರಿಂದ ಬೈಕ್ ತಪ್ಪಿಸಲು ಹೋದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಗಾಯಗೊಂಡವರನ್ನು ಗೌರಿಬಿದನೂರಿನವರು ಎಂದು ತಿಳಿದು ಬಂದಿದೆ.

ರಾಂಪುರದಲ್ಲಿ ಸಂಬಂಧಿಕರ ಮದುವೆಗೆ ಬಂದಿದ್ದು, ವಾಪಸ್ ಊರಿಗೆ ಹೋಗುವಾಗ ಈ ಘಟನೆ ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರು ಸಾವು: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲವು ತಿಂಗಳುಗಳ ಹಿಂದೆಯಷ್ಟೇ ನಡೆದಿತ್ತು.

ಜಿಲ್ಲೆಯ ಚಿಕ್ಕಬೆನ್ನೂರು ಬಳಿ ಈ ಘಟನೆ ನಡೆದಿದ್ದು, ಅಪಘಾತ ರಭಸಕ್ಕೆ ಮೂವರು ಸ್ಥಳದಲ್ಲಿ ಅಸುನಿಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್ ರೆಡ್ಡಿ (30 ವರ್ಷ), ಹರ್ಷಿತಾ (28 ವರ್ಷ) ಮತ್ತು ಮಗು ಸೋಹನ್ (2 ವರ್ಷ) ಮೃತ ದುರ್ದೈವಿಗಳಾಗಿದ್ದಾರೆ. ಗಾಯಗೊಂಡವರನ್ನು ಶಿಲ್ಪ, ಸ್ವರ್ಣ ಜಾರ್ಜ್‌, ಮಧುಮಿತ, ವಿಜಯ್ ರೆಡ್ಡಿ, ಕೃಷ್ಣ, ಎಂದು ಗುರುತಿಸಲಾಗಿದೆ.

ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ, ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಸ್ಥಳದಲ್ಲೇ ಇಬ್ಬರು ಸಾವು: ಮುಂದೆ ಚಲಿಸುತ್ತಿದ್ದ ಲಾರಿಗೆ ಕುರಿ ತುಂಬಿದ್ದ ಅಶೋಕ್ ಲೈಲಾಂಡ್ ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದ ಹೊರವಲಯದ ಆರ್.ಕೆ.ಪವರ್ ಜಿನ್ ಬಳಿ ಘಟನೆ ಇತ್ತೀಚೆಗಷ್ಟೇ ನಡೆದಿತ್ತು.

ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳೆಗೆರೆ ಶಿವಲಿಂಗಪ್ಪ (65) ಮೃತರು ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಚಳ್ಳಕೆರೆಯ ತಾಲೂಕಿನ ತನ್ನ ಗ್ರಾಮದಿಂದ ಹಿರಿಯೂರು ಕುರಿ ಸಂತೆಗೆ ಕುರಿ ವ್ಯಾಪಾರ ಮಾಡಲು ಅಶೋಕ್ ಲೈಲ್ಯಾಂಡ್ ಗಾಡಿಯಲ್ಲಿ ಕುರಿ ತುಂಬಿಕೊಂಡು ಬರುತ್ತಿರುವಾಗ ಮುಂದೆ ಚಲಿಸುತ್ತಿದ್ದ ಲಾರಿಗೆ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಅಸುನೀಗಿದ್ದಾರೆ.

ಇನ್ನು ಅಪಘಾತದ ರಭಸಕ್ಕೆ ಅಶೋಕ್ ಲೈಲ್ಯಾಂಡ್ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+