Get Updates
Get notified of breaking news, exclusive insights, and must-see stories!

ಹಿರಿಯೂರಿನ ಬಳಿ KSRTC ಬಸ್ ಲಾರಿ ನಡುವೆ ಭೀಕರ ಅಪಘಾತ, ನಾಲ್ವರು ಸಾವು, 6ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಚಿತ್ರದುರ್ಗ, ಸೆಪ್ಟೆಂಬರ್‌, 11: ಸಾರಿಗೆ (KSRTC) ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ವೇಳೆ ಬಸ್‌ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಪಾರ್ವತಮ್ಮ (45), ಮರಾಯಚೂರು ಜಿಲ್ಲೆಯ ಮಸ್ಕಿ ಮೂಲದ ರಮೇಶ್ (40) ಸಾವನ್ನಪ್ಪಿದವರಾಗಿದ್ದಾರೆ. ಮತ್ತಿಬ್ಬರು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

Accident between KSRTC bus and lorry near Hiriyur, 4 death, more than 6 seriously injured

ಇನ್ನು ಘಟನೆಯಲ್ಲಿ ಬಸ್‌ನಲ್ಲಿದ್ದ 6ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಳಿಕ ಸ್ಥಳೀಯರ ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ನಿಂತಿದ್ದ ಲಾರಿಗೆ ಕಾರು ಡಿಕ್ಕಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.

ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಕಾರು ಹಿಂಬಂದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು.

ಶಂಶುದ್ದೀನ್ (40), ಮಲ್ಲಿಕಾ (37), ಖಲೀಲ್ (42), ತಬ್ರೇಜ್ (13) ಇವರು ಭೀಕರ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಇನ್ನು ರೆಹಾನ್ (14), ರೆಹಮಾನ್ (12), ಮುಬಿ (9) ಎನ್ನುವ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು

ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಈ ವೇಳೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+