ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶೇಷ ವರದಿ; 63 ವರ್ಷಗಳ ಬಳಿಕ ದಾಖಲೆ ನಿರ್ಮಿಸಿದ ವಿವಿ ಸಾಗರ ಡ್ಯಾಂ

By ಚಿದಾನಂದ್ ಮಸ್ಕಲ್
|
Google Oneindia Kannada News

ಚಿತ್ರದುರ್ಗ, ಡಿಸೆಂಬರ್ 05; ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಮಾರಿಕಣಿವೆ ಜಲಾಶಯದಲ್ಲಿ ಬರೋಬ್ಬರಿ 63 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದ್ದು, ಕೋಡಿ ಬೀಳಲು ಕೆಲವು ಅಡಿಗಳು ಮಾತ್ರ ಬಾಕಿ ಇದೆ.

ಡ್ಯಾಂ ಸಂಪೂರ್ಣ ಭರ್ತಿ ಆಗುವುದನ್ನು ನೋಡಲು ಜಿಲ್ಲೆಯ ಜನತೆ ಕಾತುರದಿಂದ ಕಾಯುತ್ತಿದ್ದಾರೆ. ಇದೇ ಮೊದಲು ಇಷ್ಟೊಂದು ನೀರು ನೋಡುತ್ತಿರುವುದು ಎಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿದ್ದರೆ, ಮತ್ತೊಂದು ಕಡೆ ಡ್ಯಾಂ ಭರ್ತಿಯಾಗಿದ್ದರಿಂದ ರೈತಾಪಿ ವರ್ಗದಲ್ಲಿ ಸಂತಸ ಮನೆ ಮಾಡಿದೆ.

ಚಿತ್ರದುರ್ಗ ವಿಶೇಷ; 2 ದಶಕದ ಬಳಿಕ ದಾಖಲೆ ಬರೆದ ವಿವಿ ಸಾಗರ ಡ್ಯಾಂಚಿತ್ರದುರ್ಗ ವಿಶೇಷ; 2 ದಶಕದ ಬಳಿಕ ದಾಖಲೆ ಬರೆದ ವಿವಿ ಸಾಗರ ಡ್ಯಾಂ

ಹೆಚ್ಚು ಮಳೆ ಬೀಳದೆ ಬರದ ಭೂಮಿಯಾಗಿ ಬಯಲುಸೀಮೆಯಾಗಿದ್ದ ಚಿತ್ರದುರ್ಗ ಜಿಲ್ಲೆ ಹಾಗೂ ಹಿರಿಯೂರಿನ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನುಕೂಲವಾಗಲಿ ಎಂದು ಮೈಸೂರು ಮಹಾರಾಜರು ವೇದಾವತಿ ನದಿಗೆ ಅಡ್ಡಲಾಗಿ ವಾಣಿವಿಲಾಸಪುರ ಬಳಿ ಮಾರಿಕಣಿವೆ ಅಥವಾ ವಾಣಿ ವಿಲಾಸ ಜಲಾಶಯ ಕಟ್ಟಿಸಿದ್ದರು, ಈ ಅಣೆಕಟ್ಟಿಗೆ 112 ವರ್ಷಗಳ ಇತಿಹಾಸವಿದೆ.

ತಿಪ್ಪಗೊಂಡನಹಳ್ಳಿ ಡ್ಯಾಂ ನೀರು ಬೆಂಗಳೂರಿಗೆ ಬರುವುದು ಮತ್ತಷ್ಟು ವಿಳಂಬ ತಿಪ್ಪಗೊಂಡನಹಳ್ಳಿ ಡ್ಯಾಂ ನೀರು ಬೆಂಗಳೂರಿಗೆ ಬರುವುದು ಮತ್ತಷ್ಟು ವಿಳಂಬ

ಚಂಡಮಾರುತದ ಪರಿಣಾಮ ಕಳೆದ ತಿಂಗಳ ಹಿಂದೆ ಸುರಿದ ಜಿಟಿ ಜಿಟಿ ಮಳೆ ಹಾಗೂ ಭದ್ರಾ ಜಲಾಶಯದಿಂದ ಹರಿಸಿದ ನೀರಿನಿಂದ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬಂದಿದೆ. 1956ರಲ್ಲಿ 125 ಅಡಿ, 1957ರಲ್ಲಿ 125.05 ಅಡಿ, 1958 ರಲ್ಲಿ 124.25 ಅಡಿ ನೀರು ಸಂಗ್ರಹವಾಗಿತ್ತು. 2000ನೇ ಇಸವಿಯಲ್ಲಿ 122.50 ಅಡಿ, 2021ರಲ್ಲಿ 124.40 ಅಡಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಇದೀಗ 1958ರ ದಾಖಲೆಯನ್ನು ಹಿಂದಿಕ್ಕಿ ಡ್ಯಾಂ ನೀರಿನ ಮಟ್ಟ 125 ಅಡಿ ದಾಟಿ ಹೊಸ ದಾಖಲೆಯನ್ನು ನಿರ್ಮಿಸಲಿದೆ.

ಅನ್ನದಾತನ ಅನ್ನ ಕಿತ್ತುಕೊಂಡ ಮಳೆ; ಚಿತ್ರದುರ್ಗ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿಅನ್ನದಾತನ ಅನ್ನ ಕಿತ್ತುಕೊಂಡ ಮಳೆ; ಚಿತ್ರದುರ್ಗ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ

ವೇದಾವತಿ ನದಿಗೆ ಡ್ಯಾಂ ನಿರ್ಮಾಣ

ವೇದಾವತಿ ನದಿಗೆ ಡ್ಯಾಂ ನಿರ್ಮಾಣ

ರಾಜ್ಯದ ಬಹುತೇಕ ಜಲಾಶಯಗಳು ಮುಂಗಾರು ಹಂಗಾಮಿನಲ್ಲಿ ತುಂಬುವುದು ವಾಡಿಕೆ. ಆದರೆ ವಿವಿ ಸಾಗರ ಜಲಾಶಯದ ನೀರಿನ ಹರಿವು ಗಮನಿಸಿದಾಗ ಹಿಂಗಾರು ಮಳೆಗೆ ಡ್ಯಾಂನಲ್ಲಿ ನೀರು ಶೇಖರಣೆಯಾಗುತ್ತಿರುವುದು ವಿಶೇಷವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ ವೇದಾ ಎಂಬ ನದಿ ಕಡೂರಿನ ಬಳಿ ಅವತಿ ಎಂಬ ನದಿಯನ್ನು ಸೇರಿ ಅವು ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಬಳಿ ಎರಡು ಗುಡ್ಡಗಳ ಮಧ್ಯೆ ನಿರ್ಮಿಸಿರುವ ಜಲಾಶಯವೇ ಮಾರಿಕಣಿವೆ ಡ್ಯಾಂ. ಇನ್ನೂ ವಾಣಿವಿಲಾಸ ಸಾಗರವನ್ನು ಆರ್ಕಿಟೆಕ್ಚರಲ್ ಮಾಸ್ಟರ್ ಪೀಸ್ ಎಂದು ಗುರುತಿಸಲಾಗಿದೆ. ಈ ಅಣೆಕಟ್ಟನ್ನು 1897ರಲ್ಲಿ ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಕೆಂಪರಾಜಮ್ಮಣಿ ಆದೇಶದ ಮೇರೆಗೆ 'ತಾರಾ ಚಾಂದ್ ದಲಾಲ್' ಎಂಬ ಇಂಜಿನಿಯರ್ ನೇತೃತ್ವದ ತಂಡವು ಆಗಿನ ಮೈಸೂರು ದಿವಾನರಾಗಿದ್ದ ಶೇಷಾದ್ರಿ ಅಯ್ಯರ್ ಅವರ ಮುಂದಾಳತ್ವದಲ್ಲಿ ನಿರ್ಮಿಸಿತು. ಅಲ್ಲದೇ ಕೆಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೆ ವಿವಿ ಸಾಗರದ ನೀಲಿನಕ್ಷೆಯೇ ಮೂಲ ಎಂದು ಹೇಳಲಾಗುತ್ತದೆ.

ಡೆಡ್ ಸ್ಟೋರೇಜ್ ತಲುಪಿದ್ದ ಡ್ಯಾಂ

ಡೆಡ್ ಸ್ಟೋರೇಜ್ ತಲುಪಿದ್ದ ಡ್ಯಾಂ

ಡೆಡ್ ಸ್ಟೋರೇಜ್ ತಲುಪಿದ್ದ ಡ್ಯಾಂ
ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಬತ್ತಿ ಹೋಗಿ, ಡೆಡ್ ಸ್ಟೋರೆಜ್ ತಲುಪಿದ್ದ ಡ್ಯಾಂ, ದಿನ ಕಳೆದಂತೆ ನೀರಿನ ಮಟ್ಟ ತುಂಬುವ ಹಂತಕ್ಕೆ ಬಂದು ನಿಂತಿದೆ. ಇದರಿಂದ ಹಿರಿಯೂರು ತಾಲ್ಲೂಕಿನಲ್ಲಿ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಕುಡಿಯುವ ನೀರಿನ ಯೋಜನೆಗಳಿಗೆ ಹೊಸ ಚಿಗುರು ಬಂದಿದೆ.

ಹೊಸದುರ್ಗ, ಹಿರಿಯೂರು ಚಿತ್ರದುರ್ಗ ಭಾಗದಲ್ಲಿ 800 ರಿಂದ 1000 ಅಡಿ ಬೋರ್‌ ವೆಲ್ ಕೊರೆಸಿದರು ನೀರು ಸಿಗುತ್ತಿರಲಿಲ್ಲ. ಆದರೆ ವಾಣಿವಿಲಾಸ ಜಲಾಶಯದಲ್ಲಿ ನೀರು ಸಂಗ್ರಹವಾಗುತ್ತಿದ್ದಂತೆ ಡ್ಯಾಂ ಸುತ್ತ ಮುತ್ತಲಿನ ಜಮೀನು ಪ್ರದೇಶಗಳಲ್ಲಿ, ಕೊಳವೆ ಬಾವಿಗಳಲ್ಲಿ ನೀರು ಉಕ್ಕಿ ಬರುತ್ತಿವೆ. ಹೊಸದುರ್ಗ, ಹಿರಿಯೂರು ತಾಲೂಕಿನ ಕೆಲ ಭಾಗಗಳಲ್ಲಿ ಕೇವಲ 50 ರಿಂದ 200 ಅಡಿಗೆ ನೀರು ಸಿಗುತ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಕೃಷಿ, ಚಟುವಟಿಕೆಗಳು ಸಂಭ್ರಮದಿಂದ ಗರಿಗೆದರಿದ್ದು ರೈತರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಜಲಾಶಯದಲ್ಲಿ ನೀರು ಹೆಚ್ಚಾಗುತ್ತಿದ್ದಂತೆ ಸುತ್ತಲಿನ ಪರಿಸರ ರಮ್ಯ ರಮಣೀಯವಾಗಿ ನೋಡುಗರನ್ನು ಆಕರ್ಷಿಸುತ್ತಿದೆ. ಜಲಾಶಯ ತುಂಬು ಹಂತಕ್ಕೆ ಬಂದಿರೋದು, ರೈತ ಸಮುದಾಯದಲ್ಲಿ ಚೈತನ್ಯ ಮೂಡಿಸಿದರೆ ಮತ್ತೊಂದು ಕಡೆ ಜಿಲ್ಲೆಯ ಹಿರಿಯೂರು, ಚಳ್ಳಕೆರೆ ತಾಲೂಕಿನ ನಗರ ಮತ್ತು ಹಳ್ಳಿಗಳಿಗೆ ಕುಡಿಯುವ ನೀರಿನ ದಾಹ ನೀಗಿದಂತಾಗಿದೆ.

ಡ್ಯಾಂ ತಲುಪುವುದು ಹೇಗೆ?

ಡ್ಯಾಂ ತಲುಪುವುದು ಹೇಗೆ?

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಗ್ರಾಮದ ಸಮೀಪ ಈ ಡ್ಯಾಂ ಇದೆ. ಬೆಂಗಳೂರಿನಿಂದ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರಿಸುವಾಗ ಹಿರಿಯೂರು ನಗರದ ಮೂಲಕ ಹೊಸದುರ್ಗ ರಸ್ತೆಯಲ್ಲಿ 18 ಕಿಲೋಮೀಟರ್ ದೂರದ ಎಡಭಾಗದಲ್ಲಿ ಡ್ಯಾಂ ಸಿಗುತ್ತದೆ. ಶಿವಮೊಗ್ಗದಿಂದ ತರೀಕೆರೆ, ಅಜ್ಜಂಪುರ, ಹೊಸದುರ್ಗ ಮಾರ್ಗವಾಗಿ ಹಿರಿಯೂರು ಕಡೆ ಬರುವಾಗ (ಸುಮಾರು 25 ಕಿ. ಮೀ.) ಬಲಭಾಗಕ್ಕೆ ಜಲಾಶಯ ನೋಡಬಹುದು.

ದಾವಣಗೆರೆಯಿಂದ ಚಿತ್ರದುರ್ಗ ಮೂಲಕ, ಬಳ್ಳಾರಿಯಿಂದ ಚಳ್ಳಕೆರೆ, ಹಿರಿಯೂರು, ಪಾವಗಡ ಧರ್ಮಪುರ ಹೋಬಳಿ ಮೂಲಕ ಮಾರಿಕಣಿವೆ ತಲುಪಬಹುದು. ತುಮಕೂರಿನಿಂದ ಹಿರಿಯೂರು ಮೂಲಕ ಜಲಾಶಯ ತಲುಪಿ ಜಲಾಶಯ ವೀಕ್ಷಿಸಬಹುದು. ಹಿರಿಯೂರಿನಿಂದ ಹೊಸದುರ್ಗ, ಹೊಸದುರ್ಗದಿಂದ ಹಿರಿಯೂರು ಮಾರ್ಗವಾಗಿ ಖಾಸಗಿ ಬಸ್ ಸೌಲಭ್ಯ ಇದೆ. ಡ್ಯಾಂ ವೀಕ್ಷಿಸಿದ ಬಳಿಕ ಕಣಿವೆ ಮಾರಮ್ಮ ಹಾಗೂ ಹಾರನಕಣಿವೆ ಶ್ರೀ ರಂಗನಾಥ ಸ್ವಾಮಿಯ ದರ್ಶನ ಪಡೆಯಬಹುದು. (ವಿಶೇಷವಾಗಿ ಶ್ರೀ ರಂಗನಾಥ ದೇವರಿಗೆ ಹಾವು ಚೇಳು ಜರಿ ಹರಕೆ ಸಲ್ಲಿಸುವ ಪದ್ಧತಿಯು ಇಂದಿಗೂ ನಡೆದುಕೊಂಡು ಬಂದಿದೆ).

Recommended Video

ಗೋಧಿ ಹಾಗೂ ಜೀವರಕ್ಷಕ ಔಷಧ ಸಾಗಿಸಲು ಪಾಕ್ ಅನುಮತಿ | Oneindia Kannada
ಡ್ಯಾಂನ ಅಂಕಿ ಸಂಖ್ಯೆ ಮಾಹಿತಿ

ಡ್ಯಾಂನ ಅಂಕಿ ಸಂಖ್ಯೆ ಮಾಹಿತಿ

* ಪ್ರಸ್ತುತ ನೀರಿನ ಮಟ್ಟ 124.40 ಅಡಿ. ಒಳ ಹರಿವು 4002 ಕ್ಯುಸೆಕ್

* ಜಲಾಶಯದ ಒಟ್ಟು ಎತ್ತರ 43.28 ಮೀಟರ್ (142 ಅಡಿ)

* ಜಲಾಶಯದ ಉದ್ದ - 405.50 ಮೀಟರ್. ಜಲಾವೃತ ಪ್ರದೇಶ 5374. ಚದರ ಕಿಲೋಮೀಟರ್

* ಡ್ಯಾಂ ನೀರಿನ ಸಾಮರ್ಥ್ಯ 850.30 (30 ಟಿಎಂಸಿ)

English summary
Chitradurga district Hiriyur taluk Vanivilas sagar dam recorded 124.40 feet water after 63 years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X