ಜನವರಿ 10ರಂದು ಚಿತ್ರದುರ್ಗಕ್ಕೆ ಅಮಿತ್ ಶಾ
ಚಿತ್ರದುರ್ಗ, ಡಿಸೆಂಬರ್ 31 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜನವರಿ 10ರಂದು ಚಿತ್ರದುರ್ಗಕ್ಕೆ ಭೇಟಿ ನೀಡಲಿದ್ದಾರೆ. ಪಕ್ಷದ ಪರಿವರ್ತನಾ ಯಾತ್ರೆ ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.
ಚಿತ್ರದುರ್ಗ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ಈ ಕುರಿತು ಮಾಹಿತಿ ನೀಡಿದರು. 'ಜನವರಿ 10ರಂದು ಚಿತ್ರದುರ್ಗದಲ್ಲಿ ನವ ಕರ್ನಾಟಕ ಪರಿವರ್ತನಾಯಾತ್ರೆಯ ಬೃಹತ್ ಸಮಾವೇಶ ನಡೆಯಲಿದೆ' ಎಂದರು.

'2008ರ ಚುನಾವಣೆಯಲ್ಲಿ ಚಿತ್ರದುರ್ಗದಿಂದ ಯಡಿಯೂರಪ್ಪ ಚುನಾವಣಾ ಪ್ರಚಾರ ಆರಂಭಿಸಿದ್ದರು. ಪಕ್ಷಕ್ಕೆ ಯಶಸ್ಸುಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಅವರನ್ನು ಆಹ್ವಾನಿಸಿದ್ದೇವೆ' ಎಂದು ಕೆ.ಎಸ್.ನವೀನ್ ಹೇಳಿದರು.
ರಾಷ್ಟ್ರೀಯ ನಾಯಕರು, ವಿವಿಧ ಮುಖ್ಯಮಂತ್ರಿಗಳು ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜವನರಿ 28ರಂದು ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.
* ನವೆಂಬರ್ 20ರಂದು ಛತ್ತೀಸ್‌ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ನಡೆದ ಪರಿವರ್ತನಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
* ಡಿಸೆಂಬರ್ 17ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು.
* ಡಿಸೆಂಬರ್ 21ರಂದು ಹುಬ್ಬಳ್ಳಿಯಲ್ಲಿ ನಡೆದ ಪರಿವರ್ತನಾಯಾತ್ರೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಾಲ್ಗೊಂಡಿದ್ದರು.
* ಡಿಸೆಂಬರ್ 24ರಂದು ಹಾವೇರಿಯಲ್ಲಿ ನಡೆದ ಪರಿವರ್ತನಾಯಾತ್ರೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಭಾಷಣ ಮಾಡಿದ್ದರು.












Click it and Unblock the Notifications