Anna bhagya scheme: ಹಣದ ಬದಲು ಶೀಘ್ರವೇ ಅಕ್ಕಿ ವಿತರಣೆ: ಸಚಿವ ಡಿ.ಸುಧಾಕರ್ ಭರವಸೆ
ಹಿರಿಯೂರು, ನವೆಂಬರ್, 27: ಸರ್ಕಾರದ ಪ್ರಮುಖ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪ್ರತಿ ಫಲಾನುಭವಿಗೆ 5 ಕೆ.ಜಿ. ಅಕ್ಕಿ ಹಾಗೂ ಉಳಿದಂತೆ 5 ಕೆ.ಜಿ. ಅಕ್ಕಿಯ ಬದಲಿಗೆ ಅಕ್ಕಿಯ ಮೊತ್ತಕ್ಕೆ ಹಣ ಪಾವತಿಸಲಾಗುತ್ತಿದ್ದು, ಶೀಘ್ರವೇ ಹಣದ ಬದಲಿಗೆ ಪೂರ್ಣ ಪ್ರಮಾಣದಲ್ಲಿ ಅಕ್ಕಿಯನ್ನೇ ನೀಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.
ತಾಲ್ಲೂಕಿನ ಧರ್ಮಪುರದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿರಿಯೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಧರ್ಮಪುರ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಡಳಿತ ಚುರುಕುಗೊಳಿಸುವ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿಗಳ ನೆಚ್ಚಿನ ಜನತಾ ದರ್ಶನ ಕಾರ್ಯಕ್ರಮವು ಅತ್ಯುತ್ತಮ ಹಾಗೂ ಯಶಸ್ವಿಯತ್ತ ಸಾಗುತ್ತಿದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಜನರ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯ ಒದಗಿಸಲಾಗುತ್ತಿದೆ. ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಬಡವರಿಗೆ ಅನ್ನವನ್ನು ನೀಡುವ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 5 ಕೆ.ಜಿ. ಅಕ್ಕಿಯನ್ನು ನೀಡಿ, ಉಳಿದ 5 ಕೆ.ಜಿ. ಅಕ್ಕಿಯ ಮೊತ್ತ 170 ರೂಪಾಯಿಗಳನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಶೀಘ್ರವೇ ಒಂದೆರಡು ತಿಂಗಳಿನಲ್ಲಿ ಫಲಾನುಭವಿಗೆ ಹಣದ ಬದಲಿಗೆ ಪೂರ್ಣ ಪ್ರಮಾಣದಲ್ಲಿ ಅಕ್ಕಿಯನ್ನೇ ನೀಡಲಾಗುವುದು ಎಂದರು.
ಸರ್ಕಾರದ ವಿವಿಧ ಇಲಾಖೆಗಳಿಗೆ ಜನರ ಅಲೆದಾಟ ತಪ್ಪಿಸಲು, ತ್ವರಿತಗತಿಯಲ್ಲಿ ಜನರ ಸಮಸ್ಯೆ ಬಗೆಹರಿಸಬೇಕೆಂಬುದು ಜನತಾ ದರ್ಶನ ಕಾರ್ಯಕ್ರಮದ ಆಶಯವಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮವಾಗಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ಜಾನುವಾರುಗಳಿಗೆ ಮೇವು ಹಾಗೂ ನೀರಿನ ತೊಂದರೆಯಾಗದಂತೆ ಕ್ರಮವಹಿಸಲಾಗಿದ್ದು, ಬರ ಎದುರಿಸಲು ಬರಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮಸಭೆ ಮಾಡುವ ಮೂಲಕ ಜನರ ಸಮಸ್ಯೆ ಬಗೆಹರಿಸಲು ಕ್ರಮವಹಿಸಲಾಗುವುದು ಎಂದರು.
ಸರ್ಕಾರ ನೀಡಿರುವ ಭರವಸೆಯಂತೆ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಈಡೇರಿಸಲಾಗಿದೆ. ಉಳಿದಂತೆ ಯುವನಿಧಿ ಯೋಜನೆಯನ್ನು ಜನವರಿ ಮಾಹೆಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಜನಸಾಮಾನ್ಯರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಸರ್ಕಾರದ ವಿವಿಧ ಯೋಜನೆಗಳ ಜೊತೆಗೆ ಜನಸಾಮಾನ್ಯರ ಕುಂದುಕೊರತೆ ಆಲಿಸಲು, ಅಲೆದಾಟ ತಪ್ಪಿಸಲು ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಗ್ರಾಮಮಟ್ಟದಲ್ಲಿ ನಡೆಸಬೇಕು ಎಂಬ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ಧರ್ಮಪುರ ಗ್ರಾಮದಲ್ಲಿ ಜನತಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.
ಸರ್ಕಾರ ವಿವಿಧ ಇಲಾಖೆಗಳಲ್ಲಿ ಗುರಿಯೊಂದಿಗೆ ಪ್ರಗತಿ ಸಾಧಿಸಲಾಗುತ್ತಿದೆ. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಡಿಸೆಂಬರ್ ಅಂತ್ಯದೊಳಗೆ ಕಂದಾಯ ಗ್ರಾಮಗಳ ರಚನೆ ಮಾಡಬೇಕು ಎಂಬ ನಿರ್ದೇಶನ ನೀಡಲಾಗಿದೆ. ಈಗಾಗಲೇ ಪ್ರಾಥಮಿಕ ಅಧಿಸೂಚನೆ, ಅಂತಿಮ ಅಧಿಸೂಚನೆ ಹೊರಡಿಸಿದ್ದು, ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಅರ್ಹ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ರಚನೆ ಮಾಡಲಾಗುವುದು ಎಂದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುವ ಎಲ್ಲಾ ಫಲಾನುಭವಿಗಳಿಗೆ ಎನ್‍ಪಿಸಿ ಮ್ಯಾಪಿಂಗ್ ಹಾಗೂ ಆಧಾರ್ ಜೋಡಣೆಯನ್ನು ಶೇಕಡಾ 100ರಷ್ಟು ಪ್ರಗತಿ ಸಾಧಿಸಲಾಗಿದೆ. ಪೋಡಿಮುಕ್ತ ಅಭಿಯಾನ ಮಾಡಲು ಈಗಾಗಲೇ ಗುರಿ ನಿಗಧಿಪಡಿಸಲಾಗಿದ್ದು, ಪ್ರಗತಿ ಸಾಧಿಸಲಾಗುತ್ತಿದೆ. ಜನಸಾಮಾನ್ಯರ ಮನೆ ಬಾಗಿಲಿಗೆ ಹೋಗಿ ನಿಗದಿತ ಸಮಯದಲ್ಲಿ ಪರಿಹಾರ ಒದಗಿಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 4 ಕಡೆ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜನತಾ ದರ್ಶನ ಕಾರ್ಯಕ್ರಮದಲ್ಲಿ 871 ಅರ್ಜಿಗಳು ಸ್ವೀಕೃತಗೊಂಡಿವೆ. ಈಗಾಗಲೆ 721 ಅರ್ಜಿಗಳನ್ನು ವಿಲೇ ಮಾಡಲಾಗಿದ್ದು, ಇನ್ನು 150 ಅರ್ಜಿಗಳು ಮಾತ್ರ ವಿಲೇಗೆ ಬಾಕಿ ಇವೆ. ಜನಸಾಮಾನ್ಯರು ಸಲ್ಲಿಸುವ ಎಲ್ಲಾ ಅರ್ಜಿಗಳು ಗಣಕೀಕೃತವಾಗುತ್ತಿವೆ. ಜನತಾ ದರ್ಶನ ಕಾರ್ಯಕ್ರಮವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿದ್ದಾರೆ ಎಂದರು.
ಸೌಲಭ್ಯಗಳ ವಿತರಣೆ
ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ವಿತರಿಸಲಾಯಿತು. 20 ಜನರಿಗೆ ಸಂಧ್ಯಾ ಸುರಕ್ಷಾ, 10 ಜನರಿಗೆ ವಿಧವಾ ವೇತನ, 10 ಜನರಿಗೆ ಇಂದಿರಾ ಗಾಂಧಿ ವೃದ್ದಾಪ್ಯ ವೇತನ, ಮೂವರಿಗೆ ರಾಷ್ಟ್ರೀಯ ಕುಟುಂಬ ಸಹಾಯಧನ, 94ಸಿ ಯೋಜನೆಯಡಿ ಮೂವರಿಗೆ ಮನೆ ನಿವೇಶನ ಹಕ್ಕು ಪತ್ರ ವಿತರಣೆ, ಪಶುಪಾಲನಾ ಇಲಾಖೆಯಿಂದ ಹಾಗೂ ಕೃಷಿ ಇಲಾಖೆಯಿಂದ ರೈತರಿಗೆ ತಲಾ 10 ಮೇವಿನ ಬೀಜದ ಕಿಟ್ ವಿತರಣೆ, 15 ಜನ ಫಲಾನುಭವಿಗಳಿಗೆ ಬಸವ ವಸತಿ ಯೋಜನೆಯಡಿ ಸಹಾಯಧನ ಚೆಕ್‍ಗಳ ವಿತರಣೆ, 10 ಜನರಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯದ ಕಾರ್ಯಾದೇಶ, 30 ಜನರಿಗೆ ಕೃಷಿ ಇಲಾಖೆಯಿಂದ ಸ್ಪ್ರಿಂಕ್ಲರ್ ಸೆಟ್ ವಿತರಣೆ, ನಾಲ್ವರಿಗೆ ಪಿಎಂಕೆಎಸ್‍ವೈಡಬ್ಲ್ಯು ಡಿ.ಸಿ.2.0 ಯೋಜನೆಯಡಿ ಪರಿಕರಗಳ ವಿತರಣೆ ಮಾಡಲಾಯಿತು. ಕಾರ್ಯಕ್ರಮ ಕುರಿತು ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications