ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ: ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ, ಆಗಸ್ಟ್‌ 04: ಚಿತ್ರದುರ್ಗ ನಗರದಲ್ಲಿನ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಮತ್ತೊಂದು ಜೀವ ಅನುನೀಗಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 50 ವರ್ಷದ ರುದ್ರಪ್ಪ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕವಾಡಿಗರ ಹಟ್ಟಿಯಲ್ಲಿ ಜುಲೈ 31ರಂದು ಕಲುಷಿತ ನೀರು ಸೇವಿಸಿ ಮೂರು ಜನ ಸಾವನ್ನಪ್ಪಿದ್ದರು. ಜೊತೆಗೆ ಸುಮಾರು 150ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಘಟನೆಯಲ್ಲಿ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದು, ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ. ಇನ್ನು ಕಾವಾಡಿಗರ ಹಟ್ಟಿ ಜನರು ಸೇವಿಸಿದ ನೀರಿನ ಪ್ರಯೋಗಾಲಯ ವರದಿ ಬಂದಿದ್ದು, ಕಾಲರಾ ಮಾದರಿ ಅಂಶ ಪತ್ತೆಯಾಗಿತ್ತು ಎಂದು ವರದಿಯಾಗಿದೆ.

another-death-due-to-consumption-of-contaminated-water

ಕಲುಷಿತ ನೀರು ಸೇವನೆಯಿಂದ ಸಾವುಗಳು ಸಂಭವಿಸಿರುವ ಹಿನ್ನೆಲೆಯಲ್ಲಿ ಕವಾಡಿಗರ ಹಟ್ಟಿಯ ಜನರು ಪ್ರತಿಭಟನೆ ನಡೆಸಿದ್ದಾರೆ. ಘಟನೆ ನಡೆದು ಇಷ್ಟು ದಿನವಾದರೂ ಈವರೆಗೂ ಸೂಕ್ತ ಅನ್ನ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಕವಾಡಿಗರಹಟ್ಟಿ ಜನರು ತಹಶೀಲ್ದಾರ್ ನೇತೃತ್ವದ ತಂಡದ ಮುಂದೆ ಅಸಮಧಾನ ಹೊರ ಹಾಕಿದರು.

ಕವಾಡಿಗರ ನಿವಾಸಿಗಳಿಂದ ಟೈರ್​ಗೆ ಬೆಂಕಿ ಹಚ್ಚಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ತಹಶೀಲ್ದಾರ್ ನಾಗವೇಣಿ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅಕ್ಕಿ, ಬೇಳೆ, ಗೋದಿ ಸೇರಿದಂತೆ ದಿನಬಳಕೆ ವಸ್ತುಗಳ ಕಿಟ್ ವಿತರಣೆ ಮಾಡಿದರು. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನೀರಿನ ಟ್ಯಾಂಕಿಯಲ್ಲಿ ವಿಷ ಬೆರಸಿದ ಆರೋಪ ಸಹ ಕೇಳಿ ಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ಕವಾಡಿಗರ ಹಟ್ಟಿಯ ಜನರು ಆಗ್ರಹಿಸಿದ್ದಾರೆ.

another-death-due-to-consumption-of-contaminated-water

ಶಾಸಕರ ವಿರುದ್ಧ ನಿವಾಸಿಗಳು ಗರಂ

ಇನ್ನು ಕಲುಷಿತ ನೀರಿನಿಂದ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದಕ್ಕೂ ಮುನ್ನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದರು. ಈ ವೇಳೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, ಇಷ್ಟು ದಿನ ಎಲ್ಲಿಗೆ ಹೋಗಿದ್ದಿರಿ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡರು. ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಜನರನ್ನು ಶಾಸಕರ ಬೆಂಬಲಿಗರು ಸಮಾಧಾನಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+