ಚಿತ್ರದುರ್ಗದ ಡಿಸಿಸಿ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ

ಚಿತ್ರದುರ್ಗ, ಮಾ. 20 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 19 ಹುದ್ದೆಗಳು ಖಾಲಿ ಇದ್ದು, ಅಂಚೆ ಮೂಲಕ ಅಥವ ಖುದ್ದಾಗಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮಾರ್ಚ್ 30.

ಸಹಾಯಕ ಪ್ರಧಾನ ವ್ಯವಸ್ಥಾಪಕರು, ಕಿರಿಯ ಶಾಖಾ ವ್ಯವಸ್ಥಾಪಕರು, ದ್ವಿತೀಯ ದರ್ಜೆ ಸಹಾಯಕರು, ಕಂಪ್ಯೂಟರ್ ಇಂಜಿನಿಯರ್ ಸೇರಿದಂತೆ ಒಟ್ಟು 19 ಹುದ್ದೆಗಳು ಖಾಲಿ ಇವೆ. ಬ್ಯಾಂಕಿನ http://www.recruit-app.com/cdccb-2015/ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದು, ಅರ್ಜಿ ಸಲ್ಲಿಸಬಹುದು.

jobs

ಅರ್ಜಿ ಶುಲ್ಕ : ಸಾಮಾನ್ಯ ವರ್ಗ/ಪ್ರವರ್ಗ 2ಎ/ಪ್ರವರ್ಗ 2ಬಿ/ಪ್ರವರ್ಗ 3ಎ/ಪ್ರವರ್ಗ 3ಬಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 800 ರೂ., ಪ.ಜಾ/ಪ.ಪಂ/ಪ್ರವರ್ಗ-1/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 400 ರೂ.. ಒಂದಕ್ಕಿಂತ ಹೆಚ್ಚು ಹುದ್ದೆಗೆ ಅರ್ಜಿ ಸಲ್ಲಿಸುವವರು ಪ್ರತ್ಯೇಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. [ಕನ್ನಡದಲ್ಲಿ ನೇಮಕಾತಿ ಆದೇಶ ನೋಡಿ]

ಕರ್ನಾಟಕದ ಯಾವುದೇ ವಿದ್ಯುನ್ಮಾನ (ಇ-ಪೇಮೆಂಟ್) ಅಂಚೆ ಕಚೇರಿಗೆ ತೆರಳಿ ನಿಗದಿತ ಶುಲ್ಕ ಮತ್ತು 23 ರೂ. ಸೇವಾ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ ಮಾರ್ಚ್ 31.

ವಯೋಮಿತಿ : ಸಾಮಾನ್ಯ ವರ್ಗದವರಿಗೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷಗಳು. 2(ಎ)/2(ಬಿ)/3(ಎ)/3(ಬಿ) ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 38 ವರ್ಷ, ಪ.ಜಾ/ಪಂ.ಪಂ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 40 ವರ್ಷಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+