ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಹುದ್ದೆಗಳು ಖಾಲಿ ಇವೆ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಚಿತ್ರದುರ್ಗ, ಜೂನ್‌, 21: ಚಿತ್ರದುರ್ಗ ಜಿಲ್ಲಾಸ್ಪತ್ರೆಯು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಖಾಲಿಯಿರುವ ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆಸುವ ವಿಧಾನ ಹಾಗೂ ಆಯ್ಕೆಯಾದವರಿಗೆ ಮಾಸಿಕ ವೇತನ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 23 ನರ್ಸ್​​, ಜೂನಿಯರ್ ಲ್ಯಾಬೊರೇಟರಿ ಟೆಕ್ನಿಷಿಯನ್​ ಹುದ್ದೆಗಳು ಖಾಲಿಯಿದ್ದು, ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಇನ್ನು ಜೂನ್ 21, 2024 ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನಂಕವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಸರ್ಕಾರದ ಅರಸುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಹುದಾಗಿದೆ.

Apply Now for Nurse and Lab Technician Jobs at Chitradurga District Hospital

ಖಾಲಿ ಹುದ್ದೆ ಹಾಗೂ ವಿದ್ಯಾರ್ಹತೆ ವಿವರ: ನರ್ಸ್​- 18, ಜೂನಿಯರ್ ಲ್ಯಾಬೊರೇಟರಿ ಟೆಕ್ನಿಷಿಯನ್-4 ಫಾರ್ಮಾಸಿಸ್ಟ್​- 1 ಹುದ್ದೆ ಖಾಲಿಯಿದೆ. ಇನ್ನು ನರ್ಸ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿ.ಎಸ್ಸಿ, ಜಿಎನ್​​ಎಂ ನರ್ಸಿಂಗ್​ ವಿದ್ಯರ್ಹತೆ ಹೊಂದಿರಬೇಕಾಗುತ್ತದೆ. ಹಾಗೆಯೇ ಜೂನಿಯರ್ ಲ್ಯಾಬೊರೇಟರಿ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಡಿಪ್ಲೊಮಾ, ಲ್ಯಾಬ್​ ಟೆಕ್ನಿಷಿಯನ್​​ನಲ್ಲಿ ಬಿ.ಎಸ್ಸಿ ಉತ್ತೀರ್ಣರಾಗಿರಬೇಕು. ಕೊನೆಯದಾಗು ಫಾರ್ಮಾಸಿಸ್ಟ್​ ಹುದ್ದೆಗೆ ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕಾಗುತ್ತದೆ. ಅಲ್ಲದೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.

ಆಯ್ಕೆಯಾದವರಿಗೆ ಮಾಸಿಕ ವೇತನ 16,839 ರೂಪಾಯಿ ಇರುತ್ತದೆ. ಉದ್ಯೋಗದ ಸ್ಥಳ
ಚಿತ್ರದುರ್ಗ ಆಗಿದೆ. ಇನ್ನು ಆಯ್ಕೆ ಪ್ರಕ್ರಿಯೆಯನ್ನು ನೋಡುವುದಾದರೆ, ಲಿಖಿತ ಪರೀಕ್ಷೆ, ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಆಸ್ಪತ್ರೆಯ ಕಚೇರಿ
ಚಿತ್ರದುರ್ಗಕ್ಕೆ ಕಳುಹಿಸಬೇಕಾಗುತ್ತದೆ. ಈಗಾಗಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಖ ಜೂನ್‌ 5 ರಿಂದಲೇ ಆರಂಭವಾಗಿದ್ದು, ಇಂದು ಅಂದರೆ ಜೂನ್‌ 21ಕ್ಕೆ ಕೊನೆಯ ದಿನಾಂಕವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+