ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Murugha Shree Arrest : ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಬಂಧನ

|
Google Oneindia Kannada News

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸರು ಶ್ರೀಗಳನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಮುರುಘಾ ಮಠದಲ್ಲೇ ಶಿವಮೂರ್ತಿ ಶ್ರೀಗಳ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣ ದಾಖಲಾಗಿ ಏಳು ದಿನಗಳ ಬಳಿಕ ಶ್ರೀಗಳನ್ನು ಬಂಧಿಸಲಾಗಿದೆ. ಮುರುಘಾ ಶ್ರೀ ಬಂಧನಕ್ಕೆ ಹೆಚ್ಚಿದ ಒತ್ತಡದಿಂದ ಪೊಲೀಸರು ಬಂಧಿಸಿದ್ದು, ಶ್ರೀಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಚಳ್ಳಕೆರೆಯ ಡಿವೈಎಸ್‌ಪಿ ಕಚೇರಿಗೆ ಸ್ವಾಮಿಜಿಯನ್ನು ಕರೆದೊಯ್ಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗಳ ಬಂಧನದ ವೇಳೆ ನಗರದ ಜಿಲ್ಲಾಧಿಕಾರಿ ಕಚೇರಿ ವೃತ್ತ ಬಳಿ ಬ್ಯಾರಿಕೇಡ್‌ ಹಾಕಲಾಗಿದೆ. ಜೊತೆಗೆ ನಗರದ ಹಲವು ಕಡೆಗಳಲ್ಲಿಯೂ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ಇದರ ಜೊತೆಗೆ ಭದ್ರತೆಗಾಗಿ ಹೆಚ್ಚಿನ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಆರೋಪ, ಪೋಕ್ಸೊ ಹಾಗೂ ಸುಮೋಟೋ ಪ್ರಕರಣಗಳನ್ನು ಎದುರಿಸುತ್ತಿದ್ದು, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ.

Arrest of Shivamurthy Shri of Chitradurga Muruga Mutt

ದೂರಿನ ಪ್ರಕಾರ, ಮಠವು ನಡೆಸುತ್ತಿರುವ ಶಾಲೆಯಲ್ಲಿ ಓದುತ್ತಿರುವ 15 ಮತ್ತು 16 ವರ್ಷದ ಇಬ್ಬರು ಬಾಲಕಿಯರನ್ನು ಮೂರೂವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಸಂತ್ರಸ್ತರು ಜುಲೈ 24 ರಂದು ಹಾಸ್ಟೆಲ್ ತೊರೆದರು ಮತ್ತು ಅವರು ಜುಲೈ 25 ರಂದು ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗಿದ್ದಾರೆ. ಆಗಸ್ಟ್ 26 ರಂದು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಲಿಂಗಾಯತ ಧರ್ಮಗುರುಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆದಾಗ್ಯೂ, ಈ ಆರೋಪಗಳು ತನ್ನ ವಿರುದ್ಧದ ದೀರ್ಘಾವಧಿಯ ಪಿತೂರಿಯ ಭಾಗವಾಗಿದೆ ಎಂದು ಶಿವಮೂರ್ತಿ ಮುರುಘಾ ಶರಣರು ಹೇಳಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಶುದ್ಧವಾಗಿ ಹೊರಬರಲು ಪ್ರತಿಜ್ಞೆ ಮಾಡಿದ್ದಾರೆ.

English summary
Rape accused Shivamurthy Shri of Chitradurga Muruga Math was arrested today at Chitradurga's Mugugha Math.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X