• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗ; ಅಪಘಾತದಲ್ಲಿ ಗಾಯಗೊಂಡಿದ್ದ ಉಪವಿಭಾಗಾಧಿಕಾರಿ ಸಾವು

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಮೇ 04; ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಚಿತ್ರದುರ್ಗ ಉಪವಿಭಾಗಾಧಿಕಾರಿ ಪ್ರಸನ್ನ ಅವರು ಮೃತಪಟ್ಟಿದ್ದಾರೆ. ವಾಕಿಂಗ್ ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.

ಪ್ರಸನ್ನ (51) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಚಿತ್ರದುರ್ಗ ನಗರದ ಗೋನೂರು ರಸ್ತೆಯಲ್ಲಿ ವಾಕಿಂಗ್ ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ತಲೆಗೆ ಗಂಭೀರವಾದ ಗಾಯವಾಗಿತ್ತು.

ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಸಾವು: ಜಿಲ್ಲಾಧಿಕಾರಿ ಸ್ಪಷ್ಟನೆಅಫಜಲಪುರ ಆಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಸಾವು: ಜಿಲ್ಲಾಧಿಕಾರಿ ಸ್ಪಷ್ಟನೆ

ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ಪ್ರಸನ್ನರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

 ಸೋಂಕಿನಿಂದ ಸಾವು ಹೇಗೆ? ಸೀಕ್ರೆಟ್ ಬಿಚ್ಚಿಟ್ಟ ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ! ಸೋಂಕಿನಿಂದ ಸಾವು ಹೇಗೆ? ಸೀಕ್ರೆಟ್ ಬಿಚ್ಚಿಟ್ಟ ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ!

ಪ್ರಸನ್ನ ಅವರು ಕಳೆದ 1 ವರ್ಷದಿಂದ ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸನ್ನ ಅವರು ಚಿತ್ರದುರ್ಗ ತಾಲೂಕಿನ ಕಡಬನಕಟ್ಟೆ ಗ್ರಾಮದವರಾಗಿದ್ದರು. ತಂದೆ-ತಾಯಿ, ಪತ್ನಿ, ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.

ಚಿತ್ರದುರ್ಗ; ಕ್ರಿಕೆಟ್ ವಿಚಾರಕ್ಕೆ ಯುವಕರ ಮಾರಾಮಾರಿ, ಪಂದ್ಯಾವಳಿ ರದ್ದು ಚಿತ್ರದುರ್ಗ; ಕ್ರಿಕೆಟ್ ವಿಚಾರಕ್ಕೆ ಯುವಕರ ಮಾರಾಮಾರಿ, ಪಂದ್ಯಾವಳಿ ರದ್ದು

   ಮಂಡ್ಯದ ಜನ ಆಕ್ಸಿಜನ್ ನಿಂದ ಸಾಯಬಾರದು ಎಂದು ಧೃಡ ನಿರ್ಧಾರ ಮಾಡಿದ ಸುಮಲತಾ | Oneindia Kannada

   ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ವಿವಿಧ ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು ಪ್ರಸನ್ನ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

   English summary
   51 year old Prasanna Chitradurga assistant commissioner died in hospital. He injured in road accident on May 3, 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X