ಮೊಳಕಾಲ್ಮೂರು ರಸ್ತೆ ಅಗಲೀಕರಣ; 30 ಕೋಟಿ ರೂ. ಯೋಜನೆಗೆ ಚಾಲನೆ
ಚಿತ್ರದುರ್ಗ, ಜನವರಿ 02; ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದ ಮುಖ್ಯರಸ್ತೆ ಅಗಲೀಕರಣ ಕಾಮಗಾರಿಗೆ ಸ್ಥಳೀಯ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಭಾನುವಾರ ಚಾಲನೆ ನೀಡಿದರು. ಸುಮಾರು 30 ಕೋಟಿ ರೂ.ಗಳ ಯೋಜನೆ ಇದಾಗಿದೆ.
"ಮೊಳಕಾಲ್ಮುರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ 544-ಡಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುತ್ತದೆ. ಮೊಳಕಾಲ್ಮುರು ಪಟ್ಟಣವನ್ನು ಸುಂದರ ಪಟ್ಟಣವನ್ನಾಗಿ ನಿರ್ಮಿಸುವ ಗುರಿ ಹೊಂದಲಾಗಿದೆ" ಎಂದು ಸಚಿವರು ಹೇಳಿದರು.
"ಮೊಳಕಾಲ್ಮುರು ಸುಂದರ ಪಟ್ಟಣವಾಗಬೇಕು ಎಂಬುದು ಪಟ್ಟಣದ ಜನರ ಬಹುದಿನಗಳ ಬೇಡಿಕೆಯಾಗಿದೆ. ರಸ್ತೆಯ ಅಗಲೀಕರಣ ಮಾಡಬೇಕು ಎಂಬುದು ಹಲವಾರು ಜನಪ್ರತಿನಿಧಿಗಳ ಒತ್ತಾಯವಾಗಿತ್ತು. ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಮುಂಚಿತವಾಗಿಯೇ ಆಗಬೇಕಿತ್ತು. ಆದರೆ ಹಲವಾರು ಕಾರಣಗಳಿಂದ ಕಾಮಗಾರಿ ತಡವಾಗಿ ಆರಂಭವಾಗಿದೆ" ಎಂದರು.

"ಕೇಂದ್ರ ಸರ್ಕಾರದಲ್ಲಿ ನಿತಿನ್ ಗಡ್ಕರಿ ಸಾರಿಗೆ ಮಂತ್ರಿಗಳಾದ ನಂತರ ದಿನವೊಂದಕ್ಕೆ 38 ಕಿ. ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿವೆ. ಮುಂಬರುವ ದಿನಗಳಲ್ಲಿ ದಿನಕ್ಕೆ 45 ಕಿ. ಮೀ. ರಸ್ತೆ ನಿರ್ಮಿಸಬೇಕು ಎಂಬ ಚಿಂತನೆ ಇದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಇದರ ಜೊತೆಗೆ ಉದ್ಯೋಗಾವಕಾಶ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ" ಎಂದು ತಿಳಿಸಿದರು.
"ನಮ್ಮದು ಡಬಲ್ ಇಂಜಿನ್ ಸರ್ಕಾರ ಇದ್ದಂತೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇದ್ದರೆ, ರಾಜ್ಯದಲ್ಲಿ ಕಾಮನ್ ಮ್ಯಾನ್ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇದೆ. ಅದರಂತೆ ಚಿತ್ರದುರ್ಗ ಜಿಲ್ಲೆಯಲ್ಲೂ ಡಬಲ್ ಇಂಜಿನ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಒಂದು ಇಂಜಿನ್ ಹಾಗೂ ಜಿಲ್ಲೆಯ ಬಿ. ಶ್ರೀರಾಮುಲು ಒಂದು ಇಂಜಿನ್ ಆಗಿದ್ದು, ಜಿಲ್ಲೆಯಲ್ಲೂ ಕೂಡ ಡಬಲ್ ಇಂಜಿನ್ ಸರ್ಕಾರ ನಡೆಯುತ್ತಿದೆ" ಎಂದರು.
"ಭದ್ರಾ ಮೇಲ್ದಂಡೆ ಯೋಜನೆಯಡಿ ರೂ. 614 ಕೋಟಿ ವೆಚ್ಚದಲ್ಲಿ 78 ಕೆರೆಗಳನ್ನು ತುಂಬಿಸಲು ಕ್ರಮವಹಿಸಲಾಗಿದೆ. ಮೊಳಕಾಲ್ಮುರು ಕ್ಷೇತ್ರದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಲು ಕ್ಷೇತ್ರದಲ್ಲಿ 200 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಇದರ ಜೊತೆಗೆ ತುಂಗಾಭದ್ರಾ ಹಿನ್ನೀರಿನಿಂದ ಕ್ಷೇತ್ರದ ಎಲ್ಲ ಹಳ್ಳಿಗಳಿಗೂ 24 ಗಂಟೆಯೂ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮವಹಿಸಲಾಗಿದೆ" ಎಂದು ಸಚಿವರು ವಿವರಣೆ ನೀಡಿದರು.
"ಈಗಾಗಲೇ ಕೆಲಸ ಪೂರ್ಣವಾಗಿದ್ದು, 10 ಕಿ. ಮೀ. ಬಾಕಿ ಇದೆ. ಆದಷ್ಟು ಶೀಘ್ರದಲ್ಲಿ ಈ ಭಾಗದ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು. ಮೊಳಕಾಲ್ಮುರು ಪಟ್ಟಣದಲ್ಲಿ ಸುಸಜ್ಜಿತ ಬಸ್ ನಿಲ್ದಾಣಕ್ಕಾಗಿ ಈಗಾಗಲೇ ಒಂದು ಎಕರೆ ಜಮೀನು ಕೊಟ್ಟಿದ್ದು, ಅನುದಾನ ಮಂಜೂರಾತಿ ನೀಡಿ, ಬಸ್‍ನಿಲ್ದಾಣಕ್ಕೆ ಕ್ರಮಕೈಗೊಳ್ಳಲಾಗುವುದು" ಎಂದು.
"ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಪರಿಶಿಷ್ಟ ಪಂಗಡದವರಿಗೆ ಪ್ರತ್ಯೇಕವಾದ ಸಚಿವಾಲಯವನ್ನು ಸ್ಥಾಪಿಸಿ ಪ್ರಥಮ ಬಾರಿಗೆ ನನ್ನನ್ನು ಪರಿಶಿಷ್ಟ ವರ್ಗದ ಮಂತ್ರಿಯನ್ನಾಗಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪರಿಶಿಷ್ಟ ವರ್ಗದವರ ಮೀಸಲಾತಿ ಹೆಚ್ಚಳಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗುವುದು" ಎಂದು ತಿಳಿಸಿದರು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ. ನಾರಾಯಣಸ್ವಾಮಿ ಮಾತನಾಡಿ, "ಮೊಳಕಾಲ್ಮುರು ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣದ ಜೊತೆಗೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ, ಪಾದಚಾರಿ ರಸ್ತೆ, ವಿದ್ಯುತ್ ಕಂಬ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಿ ಮೊಳಕಾಲ್ಮುರು ಪಟ್ಟಣವನ್ನು ರಾಜಧಾನಿ ಬೆಂಗಳೂರಿನಂತೆ ಅಭಿವೃದ್ಧಿ ಪಡಿಸಲಾಗುವುದು" ಎಂದು ಭರವಸೆ ನೀಡಿದರು.
"ಜಿಲ್ಲೆಯಲ್ಲಿ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆಯಲ್ಲಿ ಅತ್ಯಂತ ಕಡಿಮೆ ಪ್ರಗತಿ ಸಾಧಿಸಲಾಗಿದೆ. ಕೋವಿಡ್ ಎದುರಿಸಲು ತಾಲ್ಲೂಕಿನ ಜನರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು. ಕೋವಿಡ್ ಲಸಿಕೆಯನ್ನು ತಿರಸ್ಕಾರ ಮಾಡಬೇಡಿ. ಲಸಿಕೆ ಪಡೆಯಬೇಕು" ಎಂದು ಸಚಿವರು ಮನವಿ ಮಾಡಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications