ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುರುಘಾ ಮಠದ ಆಡಳಿತಾಧಿಕಾರಿ ಎಸ್‌.ಕೆ ಬಸವರಾಜನ್ ಮತ್ತು ಪತ್ನಿ ಸೌಭಾಗ್ಯಗೆ ಜಾಮೀನು ಮಂಜೂರು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್‌, 01: ಮಾಜಿ ಶಾಸಕ ಹಾಗೂ ಮುರುಘಾ ಮಠದ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಬಸವರಾಜನ್ ದಂಪತಿ ಅರ್ಜಿ ಸಲ್ಲಿಸಿದ್ದರು. ಇದೀಗ ಚಿತ್ರದುರ್ಗದ ನ್ಯಾಯಾಲಯ ಎಸ್‌. ಕೆ. ಬಸವರಾಜನ್‌ ಮತ್ತು ಪತ್ನಿ ಸೌಭಾಗ್ಯಗೆ ಜಾಮೀನು ಮಂಜೂರು ಮಾಡಿದೆ.

ಚಿತ್ರದುರ್ಗದ 1ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಮತ್ತು ಪತ್ನಿ ಸೌಭಾಗ್ಯ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಕಿರುಕುಳ, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಬಸವರಾಜನ್ ವಿರುದ್ದ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಜಿ ಶಾಸಕ ಬಸವರಾಜನ್ ವಿರುದ್ಧ ಅತ್ಯಾಚಾರ ಹಾಗೂ ಕಿರುಕುಳದ ಆರೋಪ ಮಾಡಿ ಹಾಸ್ಟೆಲ್ ವಾರ್ಡನ್ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಅತ್ಯಾಚಾರ ಆರೋಪಿ ಮುರುಘಾ ಮಠದ ಶ್ರೀಗಳ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಅತ್ಯಾಚಾರ ಆರೋಪಿ ಮುರುಘಾ ಮಠದ ಶ್ರೀಗಳ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ

ಮತ್ತೊಂದೆಡೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಶ್ರೀಗಳ ಪರವಾಗಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿಕೆ ಮಾಡಿದೆ. ಅಕ್ಕಮಹಾದೇವಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇಂದು ಚಿತ್ರದುರ್ಗ ಜಿಲ್ಲಾ 1ನೇ ಹೆಚ್ಚುವರಿ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿದ್ದು, ಶರಣರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

Bail Granted for Murugha Mutt Administrator SK Basavarajan and his Wife Sowbhagya

ಚಿತ್ರದುರ್ಗ ಮುರುಘಾ ಮಠಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಮಠಕ್ಕೆ ಆಗಮಿಸುವ ಪ್ರತಿಯೊಬ್ಬರನ್ನು ಪೊಲೀಸರು ಪರಿಶೀಲಿಸಿ ಒಳಗೆ ಬಿಡುತ್ತಿದ್ದಾರೆ. ಮಾಜಿ ಶಾಸಕ ಹಾಗೂ ಮುರುಘಾ ಮಠದ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಾಖಾಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಬಸವರಾಜನ್ ದಂಪತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಚಿತ್ರದುರ್ಗದ ನ್ಯಾಯಾಲಯ ಎಸ್‌. ಕೆ. ಬಸವರಾಜನ್‌ ಮತ್ತು ಪತ್ನಿ ಸೌಭಾಗ್ಯಗೆ ಜಾಮೀನು ಮಂಜೂರು ಮಾಡಿದೆ.

ಚಿತ್ರದುರ್ಗದ 1ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಮತ್ತು ಪತ್ನಿ ಸೌಭಾಗ್ಯ ಅವರು ನಿರೀಕ್ಷಿಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ಬಸವರಾಜ್‌ ಹಾಗೂ ಅವರ ಪತ್ನಿ ಸೌಭಾಗ್ಯಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.


ಎಸ್.ಕೆ.ಬಸವರಾಜನ್ ಗೇಟ್ ಪಾಸ್ :
ಮುರುಘಾ ಮಠದ ಆಡಳಿತಾಧಿಕಾರಿಯಾಗಿದ್ದ ಎಸ್.ಕೆ. ಬಸವರಾಜನ್ ಅವರಿಗೆ ಮಠದಿಂದ ಗೇಟ್ ಪಾಸ್ ನೀಡಲಾಗಿದ್ದು, ಜೊತೆಗೆ ಮುರುಘಾ ಮಠದ ಎಸ್.ಜೆ.ಎಂ. ವಿದ್ಯಾಪೀಠ ಸೇವೆಯಿಂದ ಅವರನ್ನು ಮುಕ್ತಗೊಳಿಸಲಾಗಿದೆ.

ಇವರ ಬದಲಿಗೆ ಎಸ್.ಜೆ.ಎಂ. ವಿದ್ಯಾಪೀಠದದ ಕಾರ್ಯದರ್ಶಿಯನ್ನಾಗಿ ನಿವೃತ್ತ ನ್ಯಾಯಾಧೀಶ ಎಸ್.ಬಿ. ವಸ್ತ್ರದ್‌ಮಠ್‌ ನೇಮಕ ಮಾಡಲಾಗಿದೆ

English summary
Bail Granted for Murugha Mutt Administrator SK Basavarajan and his Wife Sowbhagya complaint filed by the hostel warden accusing them of sexual harassment, wrongful confinement, and abduction of two minor girls, Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X