ಚಿತ್ರದುರ್ಗದ ಮುರುಘಾ ಮಠಕ್ಕೆ ಉಸ್ತುವಾರಿ ಆಯ್ಕೆ
ಚಿತ್ರದುರ್ಗ, ಮೇ, 29: ಚಿತ್ರದುರ್ಗದ ಮುರುಘಾ ಮಠಕ್ಕೆ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ.
ಈಗಾಗಲೇ ಮುರುಘಾ ಮಠ ಹಾಗೂ ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ತಾತ್ಕಾಲಿಕ ಆಡಳಿತ ಸಮಿತಿಯನ್ನು ರಚೆನೆ ಮಾಡಲಾಗಿತ್ತು. ಈ ಸಮಿತಿಯೇ ಇದೀಗ ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣ ಇತ್ಯರ್ಥ ಆಗುವವರೆಗೂ ತಾತ್ಕಾಲಿಕ ಆಡಳಿತ ಸಮಿತಿಯನ್ನು ರಚಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದರಂತೆಯೇ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯು ಭಾನುವಾರ (ಮೇ 28) ಸಭೆ ನಡೆಸಿತ್ತು. ಸಭೆಯಲ್ಲಿ ಬಸವಪ್ರಭು ಸ್ವಾಮೀಜಿ ಅವರನ್ನು ಮಠದ ಉಸ್ತುವಾರಿಯಾಗಿ ಆಯ್ಕೆ ಮಾಡಿದ್ದಾರೆ.
ಹಾಗೆಯೆ ಇದೇ ಸಮಯದಲ್ಲಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಸಮಿತಿಯ ಕಾರ್ಯದರ್ಶಿಯನ್ನಾಗಿ ಮಾಡಲು ಕೂಡ ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಅಷ್ಟೇ ಅಲ್ಲದೆ ಆಡಳಿತ ಸಮಿತಿಯ ಸ್ವರೂಪ ಹಾಗೂ ಪದಾಧಿಕಾರಿಗಳ ಹೆಸರನ್ನು ಶೀಘ್ರವೇ ಹೈಕೋರ್ಟ್‌ಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸಭೆಯಲ್ಲಿ ಮಾಜಿ ಶಸಕ ಎಚ್.ಎಸ್.ಶಿವಶಂಕರ್, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕಾಂಗ್ರೆಸ್ ಮುಖಂಡ ಎಚ್.ಎ.ಷಣ್ಮುಖಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. ಇನ್ನು ಸಭೆ ಬಳಿಕ ಮಾತನಾಡಿದ ಬಸವಪ್ರಭು ಸ್ವಾಮೀಜಿಗಳು, ಹೈಕೋರ್ಟ್ ನಿರ್ದೇಶನದ ಆಧಾರದ ಮೇಲೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.












Click it and Unblock the Notifications