ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸವಶ್ರೀ ಪ್ರಶಸ್ತಿಗೆ ಪ್ರೊ.ಚಂದ್ರಶೇಖರ ಪಾಟೀಲ ಆಯ್ಕೆ

|
Google Oneindia Kannada News

ಚಿತ್ರದುರ್ಗ, ಏಪ್ರಿಲ್ 22 : 2018ನೇ ಸಾಲಿನ ಬಸವಶ್ರೀ ಪ್ರಶಸ್ತಿಗೆ ಸಾಹಿತಿ, ಪ್ರಗತಿಪರ ಚಿಂತಕ ಪ್ರೊ.ಚಂದ್ರಶೇಖರ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ. ಮೇ 7ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಚಿತ್ರದುರ್ಗದ ಮುರುಘಾ ಮಠ ಪ್ರತಿವರ್ಷ ಬಸವಶ್ರೀ ಪ್ರಶಸ್ತಿಯನ್ನು ನೀಡುತ್ತದೆ. ಡಾ.ಶಿವಮೂರ್ತಿ ಮುರುಘಾ ಶರಣರು 2018ನೇ ಸಾಲಿನ ಪ್ರಶಸ್ತಿಗೆ ಪ್ರೊ.ಚಂದ್ರಶೇಖರ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಾಹಿತ್ಯ ಕ್ಷೇತ್ರಕ್ಕೆ ಪ್ರೊ.ಚಂದ್ರಶೇಖರ ಪಾಟೀಲ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಮತ್ತು ಕನ್ನಡ ಭಾಷೆಯನ್ನು ಕಟ್ಟುವಲ್ಲಿ ಚಂಪಾ ಅವರು ಮಾಡಿರುವ ಕಾರ್ಯವನ್ನು ಗುರುತಿಸಿ ಬಸವಶ್ರೀ ಪ್ರಶಸ್ತಿ ನೀಡಲಾಗುತ್ತಿದೆ.

Basavashree award for Chandrashekhar Patil

ಬಸವ ಜಯಂತಿ ಅಂಗವಾಗಿ ಮೇ 7ರಂದು ಮರುಘಾ ಮಠದ ಆವರಣದಲ್ಲಿ ನಡೆಯುವ ಸಂತ ಮತ್ತು ದಾರ್ಶನಿಕರ ಸಮ್ಮೇಳನದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರಿನ ರಾಜವಶಂಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಾಲ್ಗೊಳ್ಳಲಿದ್ದಾರೆ. ಹಲವಾರು ಗಣ್ಯರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಸವಶ್ರೀ ಪ್ರಶಸ್ತಿಯೂ 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. 2017ರ ಪ್ರಶಸ್ತಿಯನ್ನು ಪರಿಸರ ಪ್ರೇಮಿ ಕಾಮೇಗೌಡರಿಗೆ ನೀಡಲಾಗಿತ್ತು.

English summary
Muruga Mutt of Chitradurga Shri Shivamurty Muruga Sharana Swamiji said the Basavashri award 2018 will be presented to poet and intellectual Chandrashekhar Patil. Chitradurga, Basavashri award, Karnataka, Kannada news, ಚಿತ್ರದುರ್ಗ, ಕರ್ನಾಟಕ, ಬಸವಶ್ರೀ ಪ್ರಶಸ್ತಿ, ಕನ್ನಡಸುದ್ದಿ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X