ಬಸವಶ್ರೀ ಪ್ರಶಸ್ತಿಗೆ ಪತ್ರಕರ್ತ ಪಿ.ಸಾಯಿನಾಥ್ ಆಯ್ಕೆ
ಚಿತ್ರದುರ್ಗ, ಅಕ್ಟೋಬರ್ 13: 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿಗೆ ಪತ್ರಕರ್ತ ಪಿ.ಸಾಯಿನಾಥ್ ಅವರು ಆಯ್ಕೆಯಾಗಿದ್ದಾರೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾಶರಣರು ಪ್ರಕಟಿಸಿದ್ದಾರೆ.
ಶ್ರೀಮಠದಲ್ಲಿ ಶುಕ್ರವಾರದಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶರಣರು, ' ಅಕ್ಟೋಬರ್ 23 ರಂದು ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ' ಎಂದು ಹೇಳಿದರು.

12ನೇ ಶತಮಾನದ ಸಮಾಜ ಸುಧಾರಕ ಅಣ್ಣ ಬಸವಣ್ಣನ ಹೆಸರಿನಲ್ಲಿ ನೀಡಲಾಗುವ ಈ ಪ್ರಶಸ್ತಿಯನ್ನು 1997ರಿಂದ ಮುರುಘಾ ಮಠ ನೀಡುತ್ತಾ ಬಂದಿದೆ. ಅಣ್ಣಾ ಹಜಾರೆ, ಮೇಧಾ ಪಾಟ್ಕರ್, ಸ್ವಾಮಿ ಅಗ್ನಿವೇಶ್, ಕಿರಣ್ ಬೇಡಿ, ಶಬಾನಾ ಆಜ್ಮಿ, ದಲೈಲಾಮಾ, ಬಲ್ಲಾದೀರ್ ಗದ್ದರ್, ಪಿ.ಟಿ ಉಷಾ ಅವರಿಗೆ ಬಸವಶ್ರೀ ಪ್ರಶಸ್ತಿ ಸಂದಿದೆ. ಪ್ರಶಸ್ತಿಯು 3 ಲಕ್ಷ ರು ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿರುತ್ತದೆ.











Click it and Unblock the Notifications