ಚಿತ್ರದುರ್ಗದಲ್ಲಿ ಜಮೀನು ಕೆಲಸ ಮಾಡುತ್ತಿದ್ದವರ ಮೇಲೆ ಕರಡಿ ದಾಳಿ; ಒಬ್ಬ ಸಾವು

ಚಿತ್ರದುರ್ಗ, ಸೆಪ್ಟೆಂಬರ್ 13: ಗ್ರಾಮಕ್ಕೆ ನುಗ್ಗಿದ ಕರಡಿಯೊಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರ ಮೇಲೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ದಳವಾಯಿಕಟ್ಟೆ ಗ್ರಾಮದಲ್ಲಿ ನಡೆದಿದೆ.

ರಮೇಶ್, ಉಮೇಶ್, ಶಶಿ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು. ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬುಕ್ಕಸಾಗರದ ರಾಜಣ್ಣ (50) ಸಾವನ್ನಪ್ಪಿದ್ದಾರೆ.

Bear Attacked Four Persons In Dalavayikatte

ಇದಲ್ಲದೆ ದಳವಾಯಿಕಟ್ಟೆ ಗ್ರಾಮದಲ್ಲಿ ಕರಡಿ ಓಡಾಡುತ್ತಿದ್ದು, ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆ ಚಿತ್ರದುರ್ಗ ತಿಮ್ಮಣ್ಣ ನಾಯಕನ ಕೆರೆ ಹಾಗೂ ಬಾಳೆಕಾಯಿ ಸಿದ್ದೇಶ್ವರ ಬೆಟ್ಟದ ಮೇಲೆ ಚಿರತೆಗಳು ಕಾಣಿಸಿಕೊಂಡಿದ್ದವು. ಇದೀಗ ಕರಡಿ ಸರದಿಯಾಗಿದೆ. ಆಹಾರಕ್ಕಾಗಿ ಕಾಡಿನಿಂದ ನಾಡಿನ ಕಡೆ ಪ್ರಾಣಿಗಳು ಮುಖ ಮಾಡುತ್ತಿರುವುದರಿಂದ ಜನರು ಭಯದಲ್ಲಿ ಬದುಕುವಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+