ದಳವಾಯಿಕಟ್ಟೆ ಗ್ರಾಮಸ್ಥರಿಂದ ಹಲ್ಲೆಗೊಳಗಾಗಿದ್ದ ಕರಡಿ ಸಾವು

ಚಿತ್ರದುರ್ಗ, ಸೆಪ್ಟೆಂಬರ್ 14: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ದಳವಾಯಿಕಟ್ಟೆ ಗ್ರಾಮದಲ್ಲಿ ಜನರಿಂದ ಹಲ್ಲೆಗೊಳಗಾದ ಕರಡಿ ಸಾವನ್ನಪ್ಪಿದೆ.

ಶನಿವಾರ ಸೆಪ್ಟೆಂಬರ್ 13ರಂದು ಹೊಸದುರ್ಗದ ದಳವಾಯಿ ಕಟ್ಟೆ ಎಂಬಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರ ಮೇಲೆ ಕರಡಿಯೊಂದು ದಾಳಿ ಮಾಡಿದ್ದು, ದಾಳಿಯಲ್ಲಿ ನಾಲ್ಕೈದು ಜನ ಗಾಯಗೊಂಡಿದ್ದರು. ಅದರಲ್ಲಿ ಬುಕ್ಕಸಾಗರದ ರಾಜಪ್ಪ‌ (50) ಎಂಬ ವ್ಯಕ್ತಿ ಮೃತ ಪಟ್ಟಿದ್ದರು. ಇದರಿಂದ ಆಕ್ರೋಶಗೊಂಡ ಜನರು ಕರಡಿ ಮೇಲೆ ಹಲ್ಲೆ ನಡೆಸಿದ್ದರು. ಕಲ್ಲು, ದೊಣ್ಣೆಗಳಿಂದ ಮನಬಂದಂತೆ ಥಳಿಸಿದ್ದರು.

Bear Beaten By Villagers Died Today In Adumalleshwara Zoo

ಅಧಿಕಾರಿಗಳು ಕರಡಿಯನ್ನು ವಶಕ್ಕೆ ಪಡೆದು ಚಿಕಿತ್ಸೆ ನೀಡಿ ಚಿತ್ರದುರ್ಗ ಸಮೀಪದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯಕ್ಕೆ ರಾತ್ರಿ ಬಿಟ್ಟಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕರಡಿ ಕೊನೆಗೂ ಕೊನೆಯುಸಿರೆಳೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+