• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗ: ''ಸಚಿವರಿಗೊಂದು ನ್ಯಾಯ, ನಮಗೊಂದು ನ್ಯಾಯನಾ?''

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಜೂನ್ 21: ಅಧಿಕಾರ ನಡೆಸುವ ಸಚಿವರಿಗೊಂದು ನ್ಯಾಯ, ಅಧಿಕಾರ ಇಲ್ಲದವರಿಗೊಂದು ನ್ಯಾಯನಾ ಎಂದು ಚಿತ್ರದುರ್ಗ ಜಿಲ್ಲಾಡಳಿತ ವಿರುದ್ಧ ಹೊಸದುರ್ಗ ಕಾಂಗ್ರೆಸ್ ಮಾಜಿ ಶಾಸಕ ಬಿ.ಜಿ ಗೋವಿಂದಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.

   ಗಂಗೂಲಿ ಕುಟುಂಬದ ಮೂವರಿಗೆ ಕೊರೊನ ಸೋಂಕು | Oneindia Kannada

   ಕಳೆದ ಏಪ್ರಿಲ್ ತಿಂಗಳಲ್ಲಿ ಮಾಜಿ ಶಾಸಕನ ಮಗನ ಮದುವೆಯಲ್ಲಿ ಮಾಜಿ ಶಾಸಕ ಬಿ.ಜಿ ಗೋವಿಂದಪ್ಪ, ಮಾಜಿ ಸಂಸದ ಚಂದ್ರಪ್ಪ, ಶಾಸಕ ಟಿ. ರಘುಮೂರ್ತಿ ಫೋಟೋ ತೆಗೆಸಿಕೊಂಡಿದ್ದರು. ಇದು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕಾನೂನು ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಸುದ್ದಿ ಭಾರಿ ವೈರಲ್ ಆಗಿತ್ತು. ಕಾನೂನುಗಳನ್ನು ಪಾಲಿಸಿಲ್ಲ ಎಂದು ಜಿಲ್ಲಾಡಳಿತ ಮಾಜಿ ಶಾಸಕನ ವಿರುದ್ಧ‌ ಎಫ್ಐಆರ್ ದಾಖಲು ಮಾಡಲಾಗಿತ್ತು.

   ಚಿತ್ರದುರ್ಗದಲ್ಲಿ ಕಾಂಗ್ರೆಸ್-ಬಿಜೆಪಿ ಶಾಸಕರ ಟಾಕ್ ವಾರ್

   ಈ ಕುರಿತು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿ ಮಾತನಾಡಿದ ಅವರು, ಅಧಿಕಾರದಲ್ಲಿರುವ ಪಕ್ಷದವರಿಗೆ ಒಂದು ಕಾನೂನು, ಅಧಿಕಾರ ಇಲ್ಲದವರಿಗೊಂದು ಕಾನೂನು ಇದೆಯಾ? ಎಂದು ಜಿಲ್ಲಾಡಳಿತವನ್ನು ಪ್ರಶ್ನಿಸಿದ್ದಾರೆ. ಈ ಕುರಿತು ಕಾನೂನಾತ್ಮಕ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಬಿ.ಜಿ ಗೋವಿಂದಪ್ಪ ತಿಳಿಸಿದರು.

   ಸರ್ಕಾರದ ಅನುಮತಿ ಪಡೆದು, ಕಾನೂನು ನಿಯಮದಂತೆ ನನ್ನ ಮಗನ ಮದುವೆಗೆ ಹೆಚ್ಚು ಜನ ಸೇರಿಸದೆ, ಸರಳ ರೀತಿಯಲ್ಲಿ ನಡೆಸಲಾಗಿದೆ. ಆದರೆ ಮಾಸ್ಕ್ ಹಾಕದೆ ಫೋಟೋ ತೆಗೆಸಿಕೊಂಡಿದ್ದಕ್ಕೆ ನಮ್ಮ ಮೇಲೆ ಎಫ್ಐಆರ್ ದಾಖಲು ಮಾಡಿರುವುದು ಸರಿಯೇ ಎಂದು ಗೋವಿಂದಪ್ಪ ಅಸಮಾಧಾನ ಹೊರ ಹಾಕಿದರು.

   ಜೂನ್ 2 ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು, ಪರುಶುರಾಂಪುರದಲ್ಲಿ ಬಾಗಿನ ಅರ್ಪಿಸುವ ನೆಪದಲ್ಲಿ ಸಾವಿರಾರು ಜನರನ್ನು ಗುಂಪಾಗಿ ಸೇರಿಸಿ ಎತ್ತಿನ ಗಾಡಿಯಲ್ಲಿ ಮೆರವಣಿಗೆ ನಡೆಸಿ, ಬೃಹತ್ ಸೇಬಿನ ಹಾರ ಹಾಕಿಸಿಕೊಂಡಿದ್ದರು. ಅವರ ವಿರುದ್ಧ ಇದುವರಿಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

   ಸಚಿವ ಶ್ರೀರಾಮುಲು ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ: ಕಾಂಗ್ರೆಸ್ ಒತ್ತಾಯ

   ಶಾಸಕ ಟಿ. ರಘುಮೂರ್ತಿ ಮಾತಾಡಿ ಮಾಜಿ ಶಾಸಕ ಗೋವಿಂದಪ್ಪ ಮಗನ ಮದುವೆ ಅತ್ಯಂತ ಸರಳವಾಗಿ ಮಗನ ಮದುವೆ ನೆರವೇರಿಸಿದ್ದಾರೆ. ನಾನು ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದೆ ಎಂದರು. ಎಸ್ಪಿ, ಡಿಸಿ ಎಲ್ಲರಿಗೂ ಒಂದೇ ಕಾನೂನು ಅನ್ವಯವಾಗಬೇಕು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

   English summary
   Former Hosadurga Congress MLA BG Govindappa has made a Expressed Outrage against the Chitradurga District Administration.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X