ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರತ್ ಬಂದ್; ಚಿತ್ರದುರ್ಗದಲ್ಲಿ ಗಮನ ಸೆಳೆದ ವಿಶಿಷ್ಟ ಪ್ರತಿಭಟನೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್ 27: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೋಮವಾರ ಭಾರತ್ ಬಂದ್‌ಗೆ ಕರೆ ನೀಡಲಾಗಿತ್ತು. ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಕನ್ನಡಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೆಂಬಲ ನೀಡಿದರು. ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ಹುಚ್ಚವನಹಳ್ಳಿ ಮಂಜುನಾಥ್ ಬಣದಿಂದ ಲಕ್ಷ್ಮೀಕಾಂತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

 ಹೊಸದುರ್ಗದಲ್ಲಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ವಿಭಿನ್ನ ಪ್ರತಿಭಟನೆ ಹೊಸದುರ್ಗದಲ್ಲಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ವಿಭಿನ್ನ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ ನಡೆಸಿದರು. ನಂತರ ಪ್ರಧಾನಿ ಭಾವಚಿತ್ರವನ್ನು ಸುಡಲು ಮುಂದಾದರು. ತಕ್ಷಣ ಪೋಲಿಸರು ಅದನ್ನು ತೆರವುಗೊಳಿಸಿದರು. ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು, ಚಳ್ಳಕೆರೆ ನಗರದಲ್ಲೂ ರೈತಪರ ಸಂಘಟನೆಗಳಿಂದ ಭಾರತ್ ಬಂದ್‌ ಬೆಂಬಲಿಸಿ ಪ್ರತಿಭಟನೆ ನಡೆದವು.

ಭಾರತ್ ಬಂದ್ ನಡುವೆ ಕೃಷಿ ಕಾಯ್ದೆ ವಿರುದ್ಧ ಧಿಕ್ಕಾರದ ಕೂಗು ಮೊಳಗಿಸಿದ ರೈತರು ಭಾರತ್ ಬಂದ್ ನಡುವೆ ಕೃಷಿ ಕಾಯ್ದೆ ವಿರುದ್ಧ ಧಿಕ್ಕಾರದ ಕೂಗು ಮೊಳಗಿಸಿದ ರೈತರು

Bharat Bandh Various Organizations Protest March In Chitradurga

ಮತ್ತೊಂದು ಕಡೆ ರೈತರು ಚಿತ್ರದುರ್ಗ ನಗರಕ್ಕೆ ಎತ್ತಿನ ಗಾಡಿ ಮೂಲಕ ನಗರಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು. ಇನ್ನು ಹೊಸದುರ್ಗ ಪಟ್ಟಣದಲ್ಲಿ ಈರುಳ್ಳಿಯನ್ನು ರಸ್ತೆಗೆ ಸುರಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಲಾಯಿತು.

ಭಾರತ ಬಂದ್: ರಾಜ್ಯದೆಲ್ಲೆಡೆ ಬೆಳಿಗ್ಗೆಯೇ ಪ್ರತಿಭಟನೆಯ ಬಿಸಿಭಾರತ ಬಂದ್: ರಾಜ್ಯದೆಲ್ಲೆಡೆ ಬೆಳಿಗ್ಗೆಯೇ ಪ್ರತಿಭಟನೆಯ ಬಿಸಿ

ಹಿರಿಯೂರು ನಗರದಲ್ಲಿ ತಾಲ್ಲೂಕು ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತಪರ ಸಂಘಟನೆಗಳು, ಕಾರ್ಮಿಕರು, ಮಹಿಳೆಯರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಅಧ್ಯಕ್ಷ ಕೆ. ಟಿ. ತಿಪ್ಪೇಸ್ವಾಮಿ ನೇತೃತ್ವದಲ್ಲಿ ಗಾಂಧಿ ವೃತ್ತದಿಂದ ರಂಜಿತ್ ಹೋಟೆಲ್ ಮೂಲಕ, ಆಸ್ಪತ್ರೆ ವೃತ್ತದಿಂದ ಹುಳಿಯಾರು ರಸ್ತೆಯ ಮೂಲಕ ಮೆರವಣಿಗೆ ಸಾಗಿ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ರೈತರು ಈರುಳ್ಳಿ ಬೆಲೆ ಕುಸಿತ, ಕೃಷಿ ಕಾಯ್ದೆ ವಿರುದ್ಧ, ಬೆಲೆ ಏರಿಕೆಯನ್ನು ಖಂಡಿಸಿದರು.

Bharat Bandh Various Organizations Protest March In Chitradurga

ಸರ್ಕಾರಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮೆರವಣಿಗೆ ತಹಶೀಲ್ದಾರ್ ಕಚೇರಿ ತಲುಪಿತು. ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಹಿರಿಯೂರು ವಕೀಲರ ಸಂಘದಿಂದ ತಹಶೀಲ್ದಾರ್ ಶಿವಕುಮಾರ್‌ಗೆ ಮನವಿ ಸಲ್ಲಿಸಿ, ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಲಾಯಿತು.

ಕುಡುಕನ ಅವಾಂತರ; ಭಾರತ್ ಬಂದ್ ಹಿನ್ನೆಲೆಯಲ್ಲಿ ಹಿರಿಯೂರು ನಗರದ ಗಾಂಧಿ ವೃತ್ತದಲ್ಲಿ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವಾಗ ಕುಡುಕನೊಬ್ಬ ಪ್ರತಿಭಟನೆ ಮಾಡುತ್ತಿದ್ದ ಮಹಿಳೆಯರ ಬಳಿ ಬಂದು ಭಿಕ್ಷೆ ಬೇಡಿದ. ಬಳಿಕ ಬಾರ್‌ಗೆ ಹೋಗಿ ಎಣ್ಣೆ ಕುಡಿದು ಬಂದ ಘಟನೆಯೂ ನಡೆಯಿತು.

ಚಿತ್ರದುರ್ಗ ಜಿಲ್ಲೆಯಲ್ಲಿ ಅಂಗಡಿ-ಮುಂಗಟ್ಟುಗಳು ಕೆಲಕಾಲ ಸ್ವಯಂಪ್ರೇರಿತವಾಗಿ ಮುಚ್ಚಿದ್ದರು. ನಂತರ ಬಾಗಿಲು ತೆರೆದು ಎಂದಿನಂತೆ ವಾಹಿವಾಟು ನಡೆಸಿದರು. ಸಾರಿಗೆ ವ್ಯವಸ್ಥೆ ಎಂದಿನಂತೆ ಸುಗಮವಾಗಿತ್ತು. ಹಾಲು, ಹಣ್ಣು, ತರಕಾರಿ, ಪತ್ರಿಕೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

Bharat Bandh Various Organizations Protest March In Chitradurga

ಕೆಲವು ಅಂಗಡಿ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದರು. ಇನ್ನೂ ಕೆಲವರು ನೈತಿಕ ಬೆಂಬಲ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಎಂದಿನಂತೆ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಿದವು.

Recommended Video

KL ರಾಹುಲ್ ನಾವೆಲ್ರೂ ಮೈದಾನದಲ್ಲಿ ಕನ್ನಡದಲ್ಲೇ ಮಾತನಾಡ್ತೇವೆ | Oneindia Kannada

ಭಾರತ್ ಬಂದ್ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳು, ರೈತಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು ಸೇರಿದಂತೆ ಮತ್ತಿತರ ಸಂಘಟನೆಗಳು ಭಾಗವಹಿಸಿದ್ದವು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

English summary
Various organizations extended support for Bharat Bandh in Chitradurga district. Protest march held in Chitradurga, Holalkere and Hiriyur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X