ಬಳ್ಳಾರಿಯಲ್ಲಿ ಭಾರತ್ ಜೋಡೋ ಬಹಿರಂಗ ಸಭೆ: 3 ಲಕ್ಷ ಜನ ಸೇರುವ ಸಾಧ್ಯತೆ
ಚಿತ್ರದುರ್ಗ, ಅಕ್ಟೋಬರ್ 13 : ಎಐಸಿಸಿ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ರಾಜ್ಯದಲ್ಲಿ 14 ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ಈಗಾಗಲೇ ಚಿತ್ರದುರ್ಗ ಸಮೀಪದ ಇದ್ದು, ಶನಿವಾರ ಗಣಿ ಜಿಲ್ಲೆಗೆ ಪ್ರವೇಶಿಸಲಿದೆ. ಇನ್ನು ಇದೇ ವೇಳೆ ಪಾದಯಾತ್ರೆಯ ಮೊದಲ ಸಮಾವೇಶ ಕೂಡ ನಡೆಯಲಿದೆ.
ಬಳ್ಳಾರಿಯ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಅಕ್ಟೋಬರ್ 15ರಂದು ಶನಿವಾರ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯ ಸಮಾವೇಶಕ್ಕೆ ಸುಮಾರು 3-4 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಜನರು ಸಮಾವೇಶಕ್ಕೆ ಬರಲಿದ್ದು, ಇದಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ನಾಯಕರು, ಮುಖಂಡರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಛತ್ತಿಸಗಡ್ ಮುಖ್ಯಮಂತ್ರಿ ಭೂಪೇಶ್ ಬಗೇಲ್ ಹಾಗೂ ರಾಜ್ಯಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋಟ್, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ ಎಂದು ಹೇಳಿದರು. ಭಾರತ್ ಜೋಡೋ ಪಾದಯಾತ್ರೆ ಶನಿವಾರ ಬೆಳಿಗ್ಗೆ ಬಳ್ಳಾರಿ ಪ್ರವೇಶಿಸಲಿದೆ. ನಂತರ ಮಧ್ಯಾಹ್ನ 12ಕ್ಕೆ ಸಮಾವೇಶ ಆರಂಭವಾಗಲಿದೆ ಎಂದರು.
ಶನಿವಾರ ಬೆಳಿಗ್ಗೆ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಬಳ್ಳಾರಿಗೆ ಆಗಮಿಸಲಿದ್ದು, ಮಧ್ಯಾಹ್ನ 12ಕ್ಕೆ ಸಮಾವೇಶ ಆರಂಭವಾಗಲಿದೆ. ರಾಜ್ಯದಲ್ಲಿ ಸಾಗುತ್ತಿರುವ ಜೋಡೊ ಯಾತ್ರೆಯ ಏಕೈಕ ಸಮಾವೇಶ ಇದಾಗಿದ್ದು, ದೊಡ್ಡ ನಗರವಾಗಿರುವ ಕಾರಣಕ್ಕೆ ಬಳ್ಳಾರಿ ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

ಕೃಷಿಕರನ್ನು ಭೇಟಿ ಮಾಡಿದ ರಾಹುಲ್
ಗುರುವಾರ ಬೊಮ್ಮಗೊಂಡನಹಳ್ಳಿಯಿಂದ ಪಾದಯಾತ್ರೆ ಆರಂಭವಾಯಿತು. ಪಾದಯಾತ್ರೆ ಮಧ್ಯೆ ರಾಹುಲ್ ಗಾಂಧಿ ಸ್ಥಳೀಯ ಮಕ್ಕಳು, ಯುವಕರೊಂದಿಗೆ ಹೆಜ್ಜೆಯಾಕಿದರು. ನಿರೋದ್ಯೋಗ ಯುವಕರೊಂದಿಗೆ ನಿರುದ್ಯೋಗಕ್ಕೆ ಕಾರಣಗಳು, ಉದ್ಯೋಗ ಸೃಷ್ಟಿಸಲು ಇರುವ ಮಾರ್ಗಗಗಳನ್ನು ಕುರಿತು ವಿಚಾರ ವಿನಿಮಯ ಮಾಡಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವಯ ಉದ್ಯೋಗ ಸೃಷ್ಟಿಗೆ ಕೈಗೊಳ್ಳುವ ಯೋಜನೆಗಳನ್ನು ಯುವಕರೊಂದಿಗೆ ಮಾಹಿತಿ ಹಂಚಿಕೊಂಡರು.
ಕೋನಸಾಗರಕ್ಕೆ ಸಾಗುವ ವೇಳೆ ಅಲ್ಲಿನ ಕೃಷಿಕರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ, ಹಿಪ್ಪು ನೇರಳೆ ಕೃಷಿ ಬಗ್ಗೆ ಮಾಹಿತಿ ಪಡೆದು, ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಂಡರು.
ಯಡಿಯೂರಪ್ಪರನ್ನು ಬಿಟ್ಟು ಬಿಜೆಪಿ ಪ್ರಚಾರ ಮಾಡಲಿ
ಕರ್ನಾಟಕದ ಬಿಜೆಪಿಯಲ್ಲಿ ನಾಯಕರೇ ಇಲ್ಲ. ಯಡಿಯೂರಪ್ಪರನ್ನು ಬಿಟ್ಟು ಪ್ರಚಾರಕ್ಕೆ ಹೋಗಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅವರು ಕಾಂಗ್ರೆಸ್‌ನ ಬಗ್ಗೆ ಮಾತನಾಡುತ್ತಾರೆ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಛೇಡಿಸಿದ್ದಾರೆ.
ಗುರುವಾರ ಭಾರತ ಐಕ್ಯತಾ ಯಾತ್ರೆ ಪ್ರಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ,"ಬಿಜೆಪಿಯವರು ಕಾಂಗ್ರೆಸ್‌ನಲ್ಲಿ ಭಿನ್ನಮತವಿದೆ ಎಂದು ಅಪ ಪ್ರಚಾರ ಮಾಡುತ್ತಾ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮಲ್ಲಿ ಹೊಂದಾಣಿಕೆ ಇದೆ. ಆದರೆ, ಅವರಲ್ಲಿ ಎಲ್ಲಿ ಹೊಂದಾಣಿಕೆ ಇದೆಯೇ ಎಂದು ಮೊದಲು ಹೇಳಲಿ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನಪರಿಷತ್ ಹಿರಿಯ ಸದಸ್ಯ ಎಚ್.ವಿಶ್ವನಾಥ್ ಬಾಯಿಗೆ ಬಂದಂತೆ ಸ್ವಪಕ್ಷವದವರನ್ನೇ ಟೀಕೆ ಮಾಡುತ್ತಿದ್ದಾರೆ. ಪಿಎಸ್‍ಐ ಹಗರಣದಲ್ಲಿ ಯಡಿಯೂರಪ್ಪ ಅವರ ಮಗನೇ ಪಾಲುದಾರನಾಗಿರುವುದನ್ನು ಯತ್ನಾಳ್ ಬಹಿರಂಗವಾಗಿಯೇ ಹೇಳಿದ್ದಾರೆ. ಇಷ್ಟೆಲ್ಲಾ ಹೇಳಿದ ಮೇಲೂ ಬಿಜೆಪಿಯವರು ಭಂಡತನದಿಂದ ಮಾತನಾಡುತ್ತಾರೆ. ಇಂಥವರಿಗೆ ಏನು ಹೇಳುವುದು ಎಂದು ಕಿಡಿಕಾರಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications