ಮೊಳಕಾಲ್ಮೂರು: ಲಾರಿಗೆ ಬೈಕ್ ಡಿಕ್ಕಿಯಾಗಿ ಓರ್ವ ಸಾವು

ಮೊಳಕಾಲ್ಮೂರು, ಆಗಸ್ಟ್‌, 18: ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ನಾಗಸಮುದ್ರ ಗೇಟ್ ಬಳಿ ಇಂದು (ಆಗಸ್ಟ್‌ 18) ಬೆಳಗಿನ ಜಾವ ಸುಮಾರು 3:30ರ ವೇಳೆಯಲ್ಲಿ ನಡೆದಿದೆ.

ಗಾಯಾಳುವನ್ನು ಸ್ಥಳೀಯ ರಾಂಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಮೃತನ ಗುರುತು ಪತ್ತೆಯಾಗಿಲ್ಲ. ಬೈಕ್‌ನಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ರಾಯಚೂರಿನಿಂದ ಬೆಂಗಳೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಇಬ್ಬರು ವ್ಯಕ್ತಿಗಳು ನಾಗಸಮುದ್ರ ಗೇಟ್ ಸಮೀಪ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Bike hit to lorry near Molakalmuru Taluk one death

ಬಳಿಕ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಇನ್ನು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಂದು ತಿಳಿದುಬಂದಿದೆ.

ವಿದ್ಯಾರ್ಥಿ ಕಾಲಿನ ಮೇಲೆ ಹರಿದ ಶಾಲಾ ವಾಹನದ ಚಕ್ರ: ಖಾಸಗಿ ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೊರ್ವನ ಬಲಗಾಲು ನಜ್ಜುಗುಜ್ಜಾಗಿರುವ ಘಟನೆ ಗೋಪಾಲಪುರ ಗ್ರಾಮದಲ್ಲಿ ಶನಿವಾರ (ಆಗಸ್ಟ್‌ 17) ನಡೆದಿದೆ.

ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬುವವರ ಮಗ ಕನ್ನೇಗಾಲ ಗ್ರಾಮದಲ್ಲಿರುವ ವಿದ್ಯಾ ಅಮೃತ ಖಾಸಗಿ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಹೃತ್ವಿಕ್(8) ಎಂಬಾತನ ಕಾಲಿಗೆ ತೀವ್ರ ಪೆಟ್ಟಾಗಿದೆ.

ಗೋಪಾಲಪುರ ಗ್ರಾಮದಲ್ಲಿ ಶನಿವಾರ ಬೆಳಗಿನ ತರಗತಿಗೆ ತೆರಳಲು ತನ್ನ ಶಾಲಾ ವಾಹನಕ್ಕಾಗಿ ಕಾಯುತ್ತಾ ಸೇತುವೆ ಮೇಲೆ ಕುಳಿತಿದ್ದ. ಈ ವೇಳೆ ಸೇಂಟ್ ಜಾನ್ ಖಾಸಗಿ ಶಾಲಾ ವಾಹನದ ಚಾಲಕ‌ ಗಾಡಿಯನ್ನು ರಿವರ್ಸ್ ತೆಗೆಯುತಿದ್ದ. ಈ ವೇಳೆ ರಸ್ತೆ ಕಿರಿದಾದ ಕಾರಣ ವಾಹನದ ಹಿಂಬದಿ ಚಕ್ರವು ವಿದ್ಯಾರ್ಥಿಯ ಬಲಗಾಲಿನ ಮೇಲೆ ಹರಿದಿದೆ.

ಘಟನೆಯಲ್ಲಿ ಬಾಲಕನ‌ ಕಾಲು ನಜ್ಜುಗುಜ್ಜಾಗಿದ್ದು, ಕೂಡಲೇ ಸ್ಥಳೀಯರು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ವಿದ್ಯಾರ್ಥಿಯನ್ನು ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಸಬ್ ಇನ್ಸ್‌ಪೆಕ್ಟರ್ ಸಾಹೇಬಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ ಶಾಲಾ ವಾಹನವನ್ನು ‌ವಶಕ್ಕೆ ಪಡೆದುಕೊಂಡಿದ್ದು, ಗುಂಡ್ಲುಪೇಟೆ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ‌ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+