ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾರ್ಕಿಂಗ್ ಗಾಗಿ ಪ್ರತಿಭಟನೆಗಿಳಿದ ಬೈನರಿ ಗಾರ್ಮೆಂಟ್ಸ್ ಕಾರ್ಮಿಕರು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜನವರಿ 4: ಗಾರ್ಮೆಂಟ್ಸ್ ನಲ್ಲಿ ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಸಾವಿರಾರು ಕಾರ್ಮಿಕರು ಜಿಲ್ಲೆಯ ಬೈನರಿ ಫ್ಯಾಕ್ಟರಿ ಮುಂದೆ ಏಕಾಏಕಿ ಪ್ರತಿಭಟನೆಗಿಳಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬೆಂಗಳೂರು ರಸ್ತೆಯಲ್ಲಿರುವ ಕೆ.ಆರ್ ಹಳ್ಳಿ ಗೇಟ್ ಸಮೀಪದ ಬೈನರಿ ಗಾರ್ಮೆಂಟ್ಸ್ ಮುಂಭಾಗದಲ್ಲಿ, ಕಾರ್ಮಿಕರ ಆಟೋ, ಬಸ್ಸ್, ಕಾರು, ಟ್ಯಾಕ್ಸಿ ಮತ್ತಿತರ ವಾಹನಗಳಿಗೆ ಪಾರ್ಕಿಂಗ್ ಕಲ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಗೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿದ್ದವು.

ಇವರು ಒಪ್ಪುವುದಿಲ್ಲ, ಅವರು ಬಿಡುವುದಿಲ್ಲ ಏನಿದು CAA-NRC ಹೋರಾಟ? ಇವರು ಒಪ್ಪುವುದಿಲ್ಲ, ಅವರು ಬಿಡುವುದಿಲ್ಲ ಏನಿದು CAA-NRC ಹೋರಾಟ?

ಕಾರ್ಮಿಕರ ವಾಹನಗಳನ್ನು ಸರ್ವೀಸ್ ರಸ್ತೆಯಲ್ಲಿ ನಿಲ್ಲಿಸಲಾಗುತ್ತಿದೆ. ಇದರಿಂದ ಓಡಾಡುವವರಿಗೆ ತೊಂದರೆಯಾಗುತ್ತದೆ. ಹಾಗಾಗಿ ವಾಹನಗಳನ್ನು ಸೂಕ್ತ ಸ್ಥಳದಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡಿಕೊಡಬೇಕೆಂದು ಗಾರ್ಮೆಂಟ್ಸ್ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿದರು.

Binary Garments Workers Protesting For Parking In Hiriyur

ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಡಿ.ಜಿ. ಪರಮೇಶ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಗಾರ್ಮೆಂಟ್ಸ್ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು. ಸಮಸ್ಯೆಯನ್ನು ಮೂರು ದಿನದ ಒಳಗೆ ಬಗೆಹರಿಸಬೇಕೆಂದು ಪ್ರತಿಭಟನಾಕಾರರು ಎಚ್ಚರಿಸಿದ್ದು, ಅಧಿಕಾರಿಗಳು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಕೈಬಿಟ್ಟರು.

English summary
Thousands of workers staged a protest in front of the Hiriyur binary factory, demanding basic facilities and parking at Garment,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X