ಬೆಲಗೂರಿನ ಬಿಂದು ಮಾಧವ ಶರ್ಮಾ ಸ್ವಾಮೀಜಿ ವಿಧಿವಶ

ಚಿತ್ರದುರ್ಗ, ನವೆಂಬರ್ 27: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದ ಆಂಜನೇಯ ದೇಗುಲದ ಅವಧೂತ ಎಂದು ಕರೆಸಿಕೊಂಡಿದ್ದ ಬಿಂದು ಮಾಧವ ಶರ್ಮಾ ಸ್ವಾಮೀಜಿ (75) ಶುಕ್ರವಾರ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಇವರು ಕೊನೆಯುಸಿರೆಳೆದಿದ್ದಾರೆ. ಅನೇಕ ದೇವಸ್ಥಾನಗಳನ್ನು ಕಟ್ಟುವ ಮೂಲಕ ಜನಪ್ರಿಯತೆ ಗಳಿಸಿದ್ದ ಶ್ರೀಗಳು ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದರು. ಪ್ರತಿಯೊಬ್ಬರನ್ನೂ ಸಮಾನತೆಯಿಂದ ಕಾಣುತ್ತಿದ್ದರು.

"ಶ್ರೀಗಳ ಸಾವು ತುಂಬಾ ನೋವು ತಂದಿದೆ. ಅವರನ್ನು ಕಳೆದುಕೊಂಡಿರುವುದು ಆಘಾತ ತಂದಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಸ್ವಾಮೀಜಿ ಮಾಡಿ ನಮ್ಮ ಮಠದ ಅಭಿವೃದ್ಧಿಗೆ ಸಹಕರಿಸಿದ್ದರು. ಇಂತಹ ಸಂತನನ್ನು ಕಳೆದುಕೊಂಡಿರುವುದು ನೋವಿನ ಸಂಗತಿ" ಎಂದು ಶ್ರೀಗಳ ಅಗಲಿಕೆಗೆ ಹೊಸದುರ್ಗ ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿಗಳು ಸಂತಾಪ ಸೂಚಿಸಿದ್ದಾರೆ.

ಸಮಾಜದಲ್ಲಿ ಜಾತಿ ನಿರ್ಮೂಲನೆಯಾಗಬೇಕು. ಬ್ರಾಹ್ಮಣ ಅಂದರೆ ಬ್ರಹ್ಮ ಜ್ಞಾನಿ, ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಅವನೇ ನಿಜವಾದ ಬ್ರಾಹ್ಮಣ ಎನ್ನುತ್ತಿದ್ದರು ಎಂದು ಸ್ವಾಮೀಜಿಗಳ ಮಾತುಗಳನ್ನು ಸ್ಮರಿಸಿದರು.

Chitradurga: Bindu Madhava Sharma Swamiji Passes Away

ವಿವಿಧ ಮಠಾಧೀಶರು ಹಾಗೂ ರಾಜಕೀಯ ನಾಯಕರು ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದ್ದಾರೆ. ಶುಕ್ರವಾರವೇ ಅಂತ್ಯಕ್ರಿಯೆ ನಡೆಯಲಿರುವುದಾಗಿ ತಿಳಿದುಬಂದಿದೆ.

Recommended Video

      ವಿಜಯಪುರದಲ್ಲಿ Basavana Gowda Yatnal ಬೆಂಬಲಿಗರಿಗೆ ಕರವೇ ಕಾರ್ಯಕರ್ತನ ಉತ್ತರ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+