ಗ್ಯಾರಂಟಿ ಅಂದ್ರೆನೇ ಬಿಜೆಪಿ ಪಕ್ಷವಾಗಿದೆ: ಬಿ.ಎಸ್.ಯಡಿಯೂರಪ್ಪ ಹೀಗೆ ಹೇಳಿದ್ದೇಕೆ?: ಇಲ್ಲಿದೆ ವಿವರ
ಬಿಜೆಪಿ ಎಂದರೆ ಗ್ಯಾರಂಟಿ, ಗ್ಯಾರಂಟಿ ಎಂದರೆ ಬಿಜೆಪಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯೂರಿನಲ್ಲಿ ಹೇಳಿದ್ದಾರೆ.
ಚಿತ್ರದುರ್ಗ, ಮಾರ್ಚ್, 20: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿಮನೆಗೆ 10 ಕೆ.ಜಿ. ಉಚಿತ ಅಕ್ಕಿ ಕೊಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯೂರಿನಲ್ಲಿ ಘೋಷಣೆ ಮಾಡಿದ್ದಾರೆ. ಹಾಗೆಯೇ ಬಿಜೆಪಿ ಅಂದರೆ ಗ್ಯಾರಂಟಿ ಕಾರ್ಡ್ ಇದ್ದಂತೆ ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಂಕಲ್ಪ ಯಾತ್ರೆಯ ರೋಡ್ ಶೋನಲ್ಲಿ ಭಾಗವಹಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ರೈತರಿಗೆ 5 ಲಕ್ಷದವರೆಗೆ ಸಾಲ ಕೊಡಲಾಗುತ್ತದೆ. ಮನೆ ಮನೆಗೆ ಉಚಿತ ನೀರು ಹಾಗೂ ಉಜ್ವಲ ಗ್ಯಾಸ್ ಯೋಜನೆ, ಶೌಚಾಲಯ, ರಸ್ತೆಗಳ ಅಭಿವೃದ್ಧಿ ಮಾಡಿದ್ದೇವೆ ಎಂದು ಹೇಳಿದರು.

ಬಿಜೆಪಿ ಎಂದರೆ ಗ್ಯಾರಂಟಿ, ಗ್ಯಾರಂಟಿ ಎಂದರೆ ಬಿಜೆಪಿಯಾಗಿದೆ. ಹಿರಿಯೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿರುವ ನಮ್ಮ ಅಭ್ಯರ್ಥಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕರೆ ನೀಡಿದರು. ಹಾಗೆಯೇ ಈ ಕ್ಷೇತ್ರದ ಕಾರ್ಯಕರ್ತರು ಬಿಜೆಪಿ ಸಂಕಲ್ಪ ಯಾತ್ರೆಯ ರೋಡ್ ಶೋನಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದಕ್ಕೆ ಧನ್ಯವಾದ ಅರ್ಪಿಸಿದರು.
ಕಾಂಗ್ರೆಸ್‌ನಿಂದ ಅನ್ಯಾಯ
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಭದ್ರಾ ಮೇಲ್ದಂಡೆ ಯೋಜನೆಯಿಂದ ವಾಣಿ ವಿಲಾಸ ಜಲಾಶಯಕ್ಕೆ ಐದು ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಐದು ಟಿಎಂಸಿ ನೀರಿನಲ್ಲಿ ಮೂರು ಟಿಎಂಸಿ ನೀರು ಕಡಿತಗೊಳಿಸಿ ಎರಡು ಟಿಎಂಸಿಗೆ ಇಳಿಸಿತ್ತು. ಈ ಮೂಲಕ ಹಿರಿಯೂರು ಕ್ಷೇತ್ರ ಹಾಗೂ ಚಿತ್ರದುರ್ಗ ಜಿಲ್ಲೆಗೆ ಕಾಂಗ್ರೆಸ್‌ನವರು ಅನ್ಯಾಯ ಮಾಡಿದ್ದಾರೆ ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ವಾಗ್ದಾಳಿ ನಡೆಸಿದರು.

ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ
ನೀವು ನೀಡಿದ ಮತಕ್ಕೆ ಮೋಸವಾಗದಂತೆ ನಾನು ಐದು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. 25 ಕೋಟಿ ರೂಪಾಯಿ ವೆಚ್ಚದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ, ಧರ್ಮಪುರ ಕೆರೆಗೆ ನೀರು ತುಂಬಿಸುವ ಯೋಜನೆ, ವಿವಿ ಸಾಗರಕ್ಕೆ ಭದ್ರಾ ನೀರು, ಹುಳಿಯಾರು ರಸ್ತೆ ಅಗಲೀಕರಣ, ಬಸ್ ಡಿಪೋ, ಬಡವರಿಗೆ ಮನೆಗಳ ನಿರ್ಮಾಣ, ಕುಡಿಯುವ ನೀರು, ಚೆಕ್ ಡ್ಯಾಂ ನಿರ್ಮಾಣ, ನಗರದಲ್ಲಿ ಯುಜಿಡಿ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದರು.
ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹಾಗೆಯೇ ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಮುಂದಿಟ್ಟುಕೊಂಡು ಮತ ಕೇಳಲು ಬಂದಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 10,000 ರೂ. ಅನುದಾನ ನೀಡಲಾಗಿದೆ. ಭದ್ರಾ ಮೇಲ್ದಂದೆ ಯೋಜನೆಗೆ 5,300 ಕೋಟಿ ರೂ. ಅನುದಾನ ಕೊಡಲಾಗಿದೆ. ಯಾವ ಕ್ಷೇತ್ರ, ಯಾರಿಗೆ ಎನ್ನುವ ಗ್ಯಾರಂಟಿ ಇಲ್ಲದ ಕಾಂಗ್ರೆಸ್‌ನವರು ಜನರಿಗೆ ಗ್ಯಾರಂಟಿ ಕಾರ್ಡ್ ಕೊಡಲು ಹೊರಟಿರಿದ್ದಾರೆ ಎಂದು ಟೀಕಿಸಿದರು.
ನನಗೆ ಮತ ನೀಡಿ- ಕೆ.ಪೂರ್ಣಿಮಾ
ಹಿರಿಯೂರು ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿರುವ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಸ್‌ರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ನೀವು ನೀಡಿದ ಮತಗಳ ಕೆಲಸಕ್ಕೆ ಕೂಲಿ ಕೊಡಿ ಎಂದು ಹೇಳಿದರು.
ಹಾಗೆಯೇ ಮತ್ತೊಮ್ಮೆ ಬಿಜೆಪಿ ಪಕ್ಷದಿಂದ ನಾನು ಸ್ಪರ್ಧಿಸುತ್ತೇನೆ. ನನಗೆ ಮತ ನೀಡಿ ಎಂದು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಮನವಿ ಮಾಡಿದರು.
ಇದಕ್ಕೂ ಮೊದಲು ರಂಜಿತಾ ಹೋಟೆಲ್‌ನಿಂದ ವಿಜಯ ಸಂಕಲ್ಪ ಯಾತ್ರೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮುಖಂಡರಾದ ಸಿದ್ದೇಶ್ ಯಾದವ್, ಎನ್.ಆರ್. ಲಕ್ಷ್ಮಿಕಾಂತ್, ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ, ಎಸ್. ಲಿಂಗಮೂರ್ತಿ, ಡಿ.ಟಿ. ಶ್ರೀನಿವಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications