ಪೆಟ್ರೋಲ್ ಸುರಿದುಕೊಂಡು ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಾಹುತಿಗೆ ಯತ್ನ

Recommended Video

      ಆತ್ಮಾಹುತಿಗೆ ಪ್ರಯತ್ನಪಟ್ಟ ಶಾಸಕನ ಬಗ್ಗೆ ಯಡಿಯೂರಪ್ಪ ಮಾತು | Oneindia Kannada

      ಚಿತ್ರದುರ್ಗ, ಜನವರಿ 7: ಅಕ್ರಮ ಮರಳು ಸಾಗಣೆ ಹೆಸರಲ್ಲಿ ಪೊಲೀಸರು ಅಮಾಯಕರನ್ನು ಬಂಧಿಸುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಗೂಳಿಹಟ್ಟಿ ಶೇಖರ್ ಪೆಟ್ರೋಲ್ ಸುರಿದುಕೊಂಡು ಆತ್ಮಾಹುತಿಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.

      ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಪೊಲೀಸ್ ಠಾಣೆ ಮುಂಭಾಗವೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ, ತಕ್ಷಣವೇ ಸ್ಥಳದಲ್ಲಿದ್ದವರು ಬೆಂಕಿ ನಂದಿಸಿದ್ದು, ಗೂಳಿಹಟ್ಟಿಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಣಾಪಾಯದಿಂದ ಪಾರಾಗಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

      ಚಿತ್ರದುರ್ಗದ ಮಾಡದಕೆರೆ ಹೋಬಳಿಯಲ್ಲಿ ಮರಳು ತುಂಬಿದ ಲಾರಿಯನ್ನು ವಶಕ್ಕೆ ಪಡೆದಿದ್ದ ಪೊಲೀಸರು ಈ ಕುರಿತು ಟ್ರ್ಯಾಕ್ಟರ್ ಮಾಲೀಕರ ಮೇಲೆ ಪ್ರಕರಣ ದಾಖಲಿಸಲು ಮುಂದಾಗಿದ್ದರು.

      BJP MLA attempts to immolate self

      ವಿಷಯ ತಿಳಿದು ಪೊಲೀಸರಿಗೆ ಕರೆ ಮಾಡಿದ ಗೂಳಿಹಟ್ಟಿ ಶೇಖರ್, ದೇವಸ್ಥಾನ ನಿರ್ಮಾಣಕ್ಕೆ ಮರಳು ತರುವವರ ಮೇಲೆ ಪ್ರಕರಣ ದಾಖಲು ಮಾಡುವ ಬದಲು ದಂಧೆಕೋರರನ್ನು ಬಂಧಿಸಿ ಜೈಲಿಗೆ ಅಟ್ಟಿ ಎಂದು ಸೂಚನೆ ನೀಡಿದ್ದರು.

      ಆದರೂ ಪೊಲೀಸರು ಪ್ರಕರಣ ದಾಖಲು ಮಾಡಲು ಮುಂದಾದಾಗ ಕ್ಯಾನ್‌ನಲ್ಲಿ ಪೆಟ್ರೋಲ್ ತುಂಬಿಕೊಂಡು ಪೊಲೀಸ್ ಠಾಣೆಗೆ ಆಗಿಮಿಸಿದ ಶೇಖರ್ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+