ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮಾರ್ಚ್ 05: ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಪುಟ್ಟಮ್ಮ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಪುತ್ರ ತಿಪ್ಪೇಸ್ವಾಮಿ ಸಾವಿನ ಬಳಿಕ ಪುಟ್ಟಮ್ಮ ಹಿಂದೂ ದೇವರ ಮೇಲೆ ಬೇಸರ ವ್ಯಕ್ತಪಡಿಸುತ್ತಿದ್ದರು ಎಂದು ತಿಳಿದುಬಂದಿದೆ.

ಗೂಳಿಹಟ್ಟಿ ಗ್ರಾಮದಲ್ಲಿ ವಾಸವಾಗಿರುವ ಪುಟ್ಟಮ್ಮ ಹೊಸದುರ್ಗ ಪಟ್ಟಣದ ಹಿರಿಯೂರು ರಸ್ತೆಯಲ್ಲಿರುವ ಚರ್ಚ್‌ಗೆ ಪ್ರತಿದಿನ ಪ್ರಾರ್ಥನೆಗೆ ತೆರಳುತ್ತಾರೆ. ಕ್ರಿಶ್ಚಿಯನ್ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿದ್ದಾರೆ.

ಕ್ರಿಶ್ಚಿಯನ್ ಆಗಿ ಜನನ, ಮುಸ್ಲೀಮನಾಗಿ ಜೀವನ, ಹಿಂದೂವಾಗಿ ಅಂತ್ಯಸಂಸ್ಕಾರ ಕ್ರಿಶ್ಚಿಯನ್ ಆಗಿ ಜನನ, ಮುಸ್ಲೀಮನಾಗಿ ಜೀವನ, ಹಿಂದೂವಾಗಿ ಅಂತ್ಯಸಂಸ್ಕಾರ

ಪುಟ್ಟಮ್ಮ ಅವರಿಗೆ ಮೂವರು ಮಕ್ಕಳು ತೆರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಮೊದಲ ಮಗ ತಿಪ್ಪೇಸ್ವಾಮಿ ಏಳು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಕ್ರಿಶ್ಚಿಯನ್ ಧರ್ಮದ ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದಾರೆ.

ಅಗಸ್ಟಾ ಆರೋಪಿ ಕ್ರಿಶ್ಚಿಯನ್ ಮೈಕಲ್‌ಗೆ ಬಿಡುಗಡೆ ಭಾಗ್ಯ ಸದ್ಯಕ್ಕಿಲ್ಲಅಗಸ್ಟಾ ಆರೋಪಿ ಕ್ರಿಶ್ಚಿಯನ್ ಮೈಕಲ್‌ಗೆ ಬಿಡುಗಡೆ ಭಾಗ್ಯ ಸದ್ಯಕ್ಕಿಲ್ಲ

BJP MLA Goolihatti Shekhar Mother Putamma Converted To Christianity

ಗೂಳಿಹಟ್ಟಿ ಗ್ರಾಮದಲ್ಲಿ ಪುಟ್ಟಮ್ಮ ಅವರು ಇರುವ ಮನೆ 2018ರ ಮಳೆಗಾಲದಲ್ಲಿ ಬಿದ್ದು ಹೋಗಿತ್ತು. ಶಾಸಕರು ತಾಯಿಗಾಗಿ ಹೊಸ ಮನೆಯನ್ನು ಕಟ್ಟಿಸಿಕೊಟ್ಟಿದ್ದರು. ಮನೆ ಗೃಹ ಪ್ರವೇಶದ ಸಂದರ್ಭದಲ್ಲಿ ಹಿಂದೂ ದೇವರುಗಳ ಫೋಟೋಗಳಿಗೆ ಪೂಜೆ ಸಲ್ಲಿಸಲಾಗಿತ್ತು.

ಹಿಂದೂ ದೇವತೆಗಳ ಅವಹೇಳನ: 'ತಾಂಡವ್' ವಿರುದ್ಧ ಎಫ್‌ಐಆರ್ಹಿಂದೂ ದೇವತೆಗಳ ಅವಹೇಳನ: 'ತಾಂಡವ್' ವಿರುದ್ಧ ಎಫ್‌ಐಆರ್

ಆದ್ದರಿಂದ, ಪುಟ್ಟಮ್ಮ ಆ ಮನೆಯಲ್ಲಿ ವಾಸ ಮಾಡುತ್ತಿಲ್ಲ. ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿದ್ದಾರೆ. ಪತಿ ದಿವಾಕರಪ್ಪ ಮತ್ತು ಪುತ್ರ ತಿಪ್ಪೇಸ್ವಾಮಿ ಸಾವಿನ ಬಳಿಕ ಹಿಂದೂ ಧರ್ಮದ ದೇವರ ಮೇಲೆ ಪುಟ್ಟಮ್ಮ ಬೇಸರ ವ್ಯಕ್ತಪಡಿಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

ಶಾಸಕ ಗೂಳಿಹಟ್ಟಿ ಶೇಖರ್ ಹಿಂದೂ ಧರ್ಮ ಹಾಗೂ ದೇವರುಗಳ ಭಕ್ತರಾಗಿದ್ದಾರೆ. ಪುಟ್ಟಮ್ಮ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆಯೇ? ಎಂಬ ಬಗ್ಗೆ ಅಧಿಕೃತವಾಗಿ ಯಾರೂ ಸಹ ಮಾಹಿತಿ ನೀಡಿಲ್ಲ.

English summary
Chitradurga district Hosadurga BJP MLA Goolihatti Shekhar mother Putamma may converted to Christianity. Putamma attending prayer in the church every day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X