• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಪಕ್ಷದಿಂದ ಉಚ್ಛಾಟನೆ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಅಕ್ಟೋಬರ್ 24: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಪಕ್ಷದಿಂದ ಶ್ರೀನಿವಾಸ್ ಟಿಕೆಟ್ ಬಯಸಿದ್ದರು. ಆದರೆ ಬಿಜೆಪಿಯಿಂದ ಶಿರಾದ ಚಿದಾನಂದ ಗೌಡ ಅವರಿಗೆ ಟಿಕೆಟ್ ನೀಡಲಾಗಿತ್ತು. ಡಿಟಿಎಸ್ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ನಾಮಪತ್ರ ವಾಪಸ್ ಪಡೆಯುವಂತೆ ಶ್ರೀನಿವಾಸ್ ಗೆ, ಡಿಸಿಎಂ ಅಶ್ವಥ್ ನಾರಾಯಣ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಮಾತುಕತೆ ನಡೆಸಿದ್ದರು. ಪಕ್ಷದ ಮುಖಂಡರ ಮಾತಿಗೆ ಮಣೆ ಹಾಕದ ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದರು. ಪಕ್ಷದ ಸೂಚನೆಯನ್ನು ಕಡೆಗಣಿಸಿ, ಮುಜುಗರಕ್ಕೆ ಕಾರಣವಾಗಿರುವ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ; ಶ್ರೀನಿವಾಸ್ ಬಿರುಸಿನ ಪ್ರಚಾರ

ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಡಿ.ಟಿ. ಶ್ರೀನಿವಾಸ್ ಅವರು ಬಿಜೆಪಿ ಹಿಂದುಳಿದ ಮೋರ್ಚಾ ಉಪಾದ್ಯಕ್ಷರಾಗಿದ್ದರು. ಎಂಎಲ್ ‍ಸಿ ಅಥವಾ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಶ್ರೀನಿವಾಸ್ ಕಣದಲ್ಲಿದ್ದರು.

   Grama Panchayat ಚುನಾವಣೆಗೆ Green ಸಿಗ್ನಲ್!! | Oneindia Kannada

   ಪಕ್ಷಕ್ಕೆ ಹಿನ್ನಡೆ: ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಪತಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವುದರಿಂದ ಬಿಜೆಪಿ ಪಕ್ಷಕ್ಕೆ ಬಹುತೇಕ ಹಿನ್ನಡೆಯಾಗಲಿದೆ ಎನ್ನಬಹುದು. ಹಿಂದಿನ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಗೊಲ್ಲ ಸಮುದಾಯದವರು ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬೆಂಬಲಿಸಿದ್ದರು. ಇದೀಗ ಇವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವುದರಿಂದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಬಹುದು ಎನ್ನಲಾಗಿದೆ.

   English summary
   BJP President Nalin Kumar Kateel has ordered to expell DT Srinivas, husband of Hiriyur MLA K Purnima from bjp who is contesting as independent candidate in southeastern graduate constituency election,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X