ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸನಗೌಡ ಪಾಟೀಲ್ ಯತ್ನಾಳ್ ಪರ ಬ್ಯಾಟ್ ಬೀಸಿದ ಬಿಜೆಪಿ ರಾಜ್ಯಾಧ್ಯಕ್ಷ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಫೆಬ್ರವರಿ 6: ಕೇಂದ್ರ ಸರ್ಕಾರ ಈಗಾಗಲೇ ರೈತರ ಜೊತೆ ಅನೇಕ‌ ಸುತ್ತಿನ ಮಾತುಕತೆ ನಡೆಸಿದ್ದು, ಒಂದೂವರೆ ವರ್ಷ ಕೃಷಿ ಕಾಯ್ದೆಗಳಿಗೆ ತಡೆ ನೀಡುವ ಭರವಸೆಯನ್ನು ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಚಿತ್ರದುರ್ಗದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರೈತರ ಹೆರಿನಲ್ಲಿ ಇದೊಂದು ರೀತಿಯ ರಾಜಕೀಯ ಹೋರಾಟವಾಗಿದೆ. ಎಡಪಕ್ಷಗಳು, ಕಾಂಗ್ರೆಸ್ ಸೇರಿಕೊಂಡು ಹೋರಾಟ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ಸಂಧಾನಕ್ಕೆ ಕರೆದಾಗ ಮಾತುಕತೆ ಮಾಡುವುದು ಕ್ರಮ, ಆದರೆ ಅವರು ಮಾತನಾಡಲು ಸಿದ್ಧರಿಲ್ಲ ಎಂದರು.

ಯುಗಾದಿಗೂ ಮೊದಲೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ; ಮತ್ತೆ ಗುಡುಗಿದ ಯತ್ನಾಳ್!ಯುಗಾದಿಗೂ ಮೊದಲೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ; ಮತ್ತೆ ಗುಡುಗಿದ ಯತ್ನಾಳ್!

ಇದೇ ವೇಳೇ ವಿವಿಧ ಸಮಯದಾಯಗಳಿಗೆ ಮೀಸಲಾತಿ ಬಗ್ಗೆ ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದರಲ್ಲದೆ, ಸಿಎಂ ಯಡಿಯೂರಪ್ಪ ವಿರುದ್ಧ ಸತತವಾಗಿ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರ ಬ್ಯಾಟಿಂಗ್ ಮಾಡಿದರು.

 Chitradurga: BJP President Nalin Kumar Kateel Reacted About New Agriculture Laws

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ವಿರುದ್ಧ ತಿರುಗಿ ಬಿದ್ದಿಲ್ಲ, ತಮ್ಮ ಸಮಸ್ಯೆ ಬಗ್ಗೆ ಕೇಳಿದ್ದಾರೆ ಅಷ್ಟೆ. ಶಾಸಕ ಯತ್ನಾಳ್ ದಿನಕ್ಕೊಂದು ಮಾತು ಹೇಳುತ್ತಾರೆ, ದಿನಕ್ಕೊಂದು ಕನಸು ಕಾಣುತ್ತಾರೆ ಅದು ಸಹಜ. ಯತ್ನಾಳ್ ಹೇಳಿಕೆಗಳ ಬಗ್ಗೆ ಶಿಸ್ತು ಸಮಿತಿಗೆ ವರದಿ ಕಳಿಸಲಾಗಿದೆ, ಕೇಂದ್ರ ಸಮಿತಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

English summary
The central government has already held several rounds of talks with the farmers, promising to hold on agricultural laws for a year and a half, BJP president Nalin Kumar Katil said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X