ಚಾಮರಾಜನಗರ ನಗರಸಭೆಯಲ್ಲಿ ಅರಳಿದ ಕಮಲ, ಕಾಂಗ್ರೆಸ್‌ಗೆ ಮುಖಭಂಗ
ಚಾಮರಾಜನಗರ, ಸೆಪ್ಟೆಂಬರ್, 09: ಚಾಮರಾಜನಗರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪ್ಲಾನ್ ಸಕ್ಸಸ್ ಆದ ಪರಿಣಾಮ ಗೆಲುವಿನ ಹೊಸ್ತಿಲಲ್ಲಿದ್ದ ಕಾಂಗ್ರೆಸ್ ಮುಗ್ಗರಿಸಿ ಬಿದ್ದು ಬಿಜೆಪಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದೆ. ಹಾಗಾದರೆ ಯಾವ್ಯಾವ ಪಕ್ಷದಿಣದ ಯಾರು ಸ್ಪರ್ಧೆ ಮಾಡಿದ್ದರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
31 ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್‌ನ ಮೂವರು ಸದಸ್ಯರು ಗೈರಾದ ಪರಿಣಾಮ ಅನಾಯಸವಾಗಿ ಬಿಜೆಪಿ 2ನೇ ಬಾರಿಗೆ ಗದ್ದುಗೆ ಏರಿತು. ಬಿಜೆಪಿಯ ಸುರೇಶ್ ನಾಯಕ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಮಮತಾ ಬಾಲಸುಬ್ರಹ್ಮಣ್ಯ ಆಯ್ಕೆಯಾದರು.

ಬಿಜೆಪಿ ಆಪರೇಷನ್ ರಿವರ್ಸ್ ಪ್ಲಾನ್ ಮಾಡಲು ಶಾಸಕ ಸಿ.ಪುಟ್ಟರಂಗಶೆಟ್ಟಿ ವಿಫಲರಾದ ಹಿನ್ನೆಲೆ ಕಾಂಗ್ರೆಸ್ ಪಕ್ಷ ಕೊನೆ ಘಳಿಗೆಯಲ್ಲಿ ಅಧಿಕಾರ ಕಳೆದುಕೊಂಡಿತು. ನಗರಸಭೆಯ 31 ಹಾಗೂ ಸಂಸದ, ಶಾಸಕರ ಬಲದೊಂದಿಗೆ 33 ಸದಸ್ಯರ ಬಲವನ್ನು ಹೊಂದಿತ್ತು.
ಇನ್ನು ಓರ್ವ ಬಿಎಸ್ಪಿ ಸದಸ್ಯ ಹೆಚ್ಚು ಸಭೆಗೆ ಗೈರು ಹಾಜರಿಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸದಸ್ಯತ್ವ ರದ್ದುಗೊಳಿಸಿದ್ದರು. 32 ಮಂದಿ ಸದಸ್ಯರ ಬಲ ಹೊಂದಿರುವ ನಗರಸಭೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯಿಂದ ಸುರೇಶ್, ಮಮತಾ ಹಾಗೂ ಕಾಂಗ್ರೆಸ್ ಪಕ್ಷದಿಂದ ಆರ್.ಎಂ. ರಾಜಪ್ಪ, ಅಬ್ರಾರ್ ಅಹಮದ್ ನಾಮಪತ್ರ ಸಲ್ಲಿಸಿದ್ದರು.
ಬಳಿಕ ನಡೆದ ಚುನಾವಣೆಯಲ್ಲಿ ಅಧ್ಯಕ್ಷ -ಉಪಾಧ್ಯಕ್ಷ ಆಯ್ಕೆಯ ಪ್ರಕ್ರಿಯೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ಆಯ್ಕೆಯನ್ನು ಚುನಾವಣಾ ಅಧಿಕಾರಿ ಆಗಿದ್ದ ಉಪವಿಭಾಗಾಧಿಕಾರಿ ಮಹೇಶ್ ಅಧಿಕೃತವಾಗಿ ಘೋಷಣೆ ಮಾಡಿದರು.
ಬಿಜೆಪಿಯ ರಾಮಸಮುದ್ರ ಸುರೇಶ್ ಹಾಗೂ ಮಮತಾ 15 ಮತಗಳನ್ನು ಪಡೆದು ಅಧ್ಯಕ್ಷ-ಉಪಾಧ್ಯಕ್ಷರಾದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಆರ್.ಎಂ.ರಾಜಪ್ಪ, ಎಸ್‌ಡಿಪಿಐ ಅಭ್ಯರ್ಥಿ ಅಬ್ರಾರ್ ಅಹಮದ್ ತಲಾ 14 ಮತಗಳನ್ನು ಪಡೆದು ಪರಾಜಿತರಾದರು.
ಮೂವರು ಕಾಂಗ್ರೆಸ್ ಸದಸ್ಯರಾದ ಆರ್.ಪಿ.ನಂಜುಂಡಸ್ವಾಮಿ, ನೀಲಮ್ಮ, ಭಾಗ್ಯಮ್ಮ ಸಭೆಗೆ ಗೈರಾಗಿದ್ದು, ಮತ್ತೋರ್ವ ಕಾಂಗ್ರೆಸ್ ಸದಸ್ಯೆ ಚಂದ್ರಕಲಾ ಸಭೆಗೆ ಆಗಮಿಸಿ, ಬಿಜೆಪಿ ಪರವಾಗಿ ಕೈ ಎತ್ತಿದರು. ಬಿಜೆಪಿ ಸದಸ್ಯ ಮಹದೇವಯ್ಯ ಕಾಂಗ್ರೆಸ್ ಪರವಾಗಿ ಕೈ ಎತ್ತುವ ಮೂಲಕ ಕ್ರಾಸ್ ವೋಟ್ ಮಾಡಿದರು.
ನಗರಸಭೆ ಅಧ್ಯಕ್ಷ ಸ್ಥಾನ ಕೈ ವಶ: ತೀವ್ರ ಕುತೂಹಲ ಕೆರಳಿಸಿದ್ದ ಚಿತ್ರದುರ್ಗ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಅಂತಿಮ ಹಂತ ತಲುಪಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮೇಲುಗೈ ಸಾಧಿಸಿದ್ದಾರೆ. ಹಾಗಾದರೆ ಯಾರಿಗೆ ಯಾವ್ಯಾವ ಸ್ಥಾನ ಯಾರಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಎರಡು ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಸುಮೀತಾ.ಬಿ.ಎನ್. ಹಾಗೂ ಉಪಾಧ್ಯಕ್ಷರಾಗಿ ಶ್ರೀದೇವಿ.ಜಿ.ಎಸ್ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಘೋಷಣೆ ಮಾಡಿದರು.
ನಗರಸಭೆ ಸದಸ್ಯರ ಸಂಖ್ಯಾಬಲ ಎಷ್ಟು?: ಅಧ್ಯಕ್ಷ ಸ್ಥಾನಕ್ಕೆ ಸದಸ್ಯರಾದ ಸುನೀತಾ.ಬಿ.ಎಂ ಹಾಗೂ ತಾರಕೇಶ್ವರಿ ಎಸ್.ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯರಾದ ಶ್ರೀದೇವಿ.ಜಿ.ಎಸ್ ಹಾಗೂ ರೋಹಿಣಿ.ಬಿ.ಎಸ್ ನಾಮಪತ್ರ ಸಲ್ಲಿಸಿದ್ದರು. ಚಿತ್ರದುರ್ಗ ನಗರಸಭೆ 35 ಜನ ಚುನಾಯಿತ ಸದಸ್ಯ ಬಲ ಹೊಂದಿದ್ದು, ಇದರಲ್ಲಿ ಓರ್ವ ಸದಸ್ಯರು ಮೃತ ಪಟ್ಟಿದ್ದರಿಂದ ಚುನಾಯಿತ ನಗರ ಸಭೆ ಸದಸ್ಯರ ಬಲ 34ಕ್ಕೆ ಇಳಿದಿತ್ತು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ನಗರಸಭೆ ವ್ಯಾಪ್ತಿ ಪ್ರತಿನಿಧಿಸುವ ವಿಧಾನಸಭಾ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ (ಆಗಸ್ಟ್ 26) ನಡೆದ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಒಟ್ಟು 35 ಸದಸ್ಯರು ಮತ ಚಲಾಯಿಸಿದರು. ಈ ಪೈಕಿ ಸುನಿತಾ.ಬಿ.ಎನ್ ಹಾಗೂ ಶ್ರೀದೇವಿ.ಜಿ.ಎಸ್ ತಲಾ 22 ಮತಗಳನ್ನು ಪಡೆಯುವ ಮೂಲಕ ಅನುಕ್ರಮವಾಗಿ ನಗರಸಭೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಗಾದಿಗೆ ಏರಿದ್ದಾರೆ.












Click it and Unblock the Notifications