ಡಿಕೆಶಿ ಗೆದ್ದು ಬರಲಿ, ಒಳ್ಳೇದಾಗಲಿ ಎಂದು ಹಾರೈಸಿದ ಬಿ.ವೈ.ರಾಘವೇಂದ್ರ

Recommended Video

      DK Shivakumar : ಡಿಕೆಶಿಗೆ ಒಳ್ಳೇದಾಗಲಿ ಎಂದು ಹಾರೈಸಿದ ಬಿ.ವೈ.ರಾಘವೇಂದ್ರ | Oneindia Kannada

      ಚಿತ್ರದುರ್ಗ, ಸೆಪ್ಟೆಂಬರ್ 5: "ಮಾಜಿ ಸಚಿವ ಡಿ.ಕೆ.‌ಶಿವಕುಮಾರ್ ಅವರ ಬಂಧನದ ವಿಚಾರದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡಿಲ್ಲ, ಕಾನೂನು ಹೋರಾಟದಲ್ಲಿ ಅವರಿಗೆ ಒಳ್ಳೆಯದಾಗಲಿ" ಎಂದು ಹಾರೈಸಿದ್ದಾರೆ ಶಿವಮೊಗ್ಗ ಸಂಸದ ಬಿ‌.ವೈ.ರಾಘವೇಂದ್ರ.

      ಚಿತ್ರದುರ್ಗ ಮುರುಘಾ ಮಠದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. "ಯಾವುದೇ ವ್ಯಕ್ತಿಗೆ ನೋವಾದಾಗ ಹೀಗೆ ಆರೋಪ ಮಾಡುವುದು ಸಾಮಾನ್ಯ. ಆದರೆ, ಅವರಿಗೆ ಕಾನೂನು ಹೋರಾಟದಲ್ಲಿ ಒಳ್ಳೆಯದಾಗಲಿ" ಎಂದು ಹಾರೈಸಿದರು.

      "ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಕೂಡಾ ನಾವು ದ್ವೇಷ ರಾಜಕೀಯ ಮಾಡುವುದಿಲ್ಲ. ಸಿಬಿಐ, ಇಡಿ, ಐಟಿ ಸಂಸ್ಥೆಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿವೆ. ಈ ವಿಚಾರದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡುವುದಿಲ್ಲ" ಎಂದು ಹೇಳಿದರು.

      BY Raghavendra Wished DK Shivakumar To Win In ED Case

      "ಕಾಂಗ್ರೆಸ್ ಈಗ ಹೀನಾಯ ಸ್ಥಿತಿಗೆ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ದೇಶಾದ್ಯಂತ ವಿರೋಧ ಪಕ್ಷದ ಸ್ಥಾನಮಾನ ಕೂಡ ಸಿಗುತ್ತಿಲ್ಲ. ಹೀಗಾಗಿ ಯಾವುದೇ ಚುನಾವಣೆ ಗೆಲ್ಲಲು ಡಿಕೆಶಿ ಅವರನ್ನು ಅರೆಸ್ಟ್ ಮಾಡಿಸುವ ಕೆಲಸ ಮಾಡಿಲ್ಲ" ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+