ಸಚಿವ ಜಮೀರ್ ಅಹ್ಮದ್ ಖಾನ್ ಗಡಿಪಾರು ಮಾಡಬೇಕು: ಬಿವೈ ವಿಜಯೇಂದ್ರ
ಚಿತ್ರದುರ್ಗ, ನವೆಂಬರ್ 03: ಕರ್ನಾಟಕದಲ್ಲಿ ಮಠಗಳು, ರೈತರು, ಕಾರ್ಮಿಕರು ಸೇರಿದಂತೆ ಬಡವರ ಜಮೀನುಗಳನ್ನು ರಾಜ್ಯ ಸರ್ಕಾರ ವಕ್ಫ್ ಮಂಡಳಿಯಿಂದ ಕಬಳಿಸುತ್ತಿದೆ ಎಂಬ ಆರೋಪ, ಪ್ರತ್ಯಾರೋಪ ಜೋರಾಗಿದೆ. ವಿವಾದ ಕುರಿತು ವಕ್ಫ್ ಬೋರ್ಡ್ ಪರ ವಿರೋಧ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಈ ಮಧ್ಯೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಗಡಿಪಾರು ಮಾಡಿ ರಾಜ್ಯಕ್ಕೆ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಭಾನುವಾರ ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಜಮೀರ್ ಅಹಮದ್ ಖಾನ್ ಅವರು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ಸುಳ್ಳು ಹೇಳಿಎ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಗೊಂದಲ ಸೃಷ್ಟಿ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಜಮೀರ್ ಬೆಂಕಿ ಹಚ್ಚಿದ್ದರು ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಕಿಡಿ ಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅಹಿಂದ ಹೆಸರಲ್ಲಿ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡ್ತಿದ್ದಾರೆ. ಅಭಿವೃದ್ಧಿ ಇಲ್ಲ ಎಂದು ಆಡಳಿತ ಪಕ್ಷದ ಶಾಸಕರು ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಕಳೆದ ಎರಡು ವರ್ಷದಲ್ಲಿ ಯಾವ ಕ್ಷೇತ್ರಕ್ಕೂ ಅನುದಾನ ನೀಡಿಲ್ಲ, ಭ್ರಷ್ಟಾಚಾರ ಕೂಡಾ ರಾಜ್ಯ ಸರ್ಕಾರದಲ್ಲಿ ನಡೆಯುತ್ತಿದೆ. ಆಡಳಿತ ಪಕ್ಷದ ಶಾಸಕರ ವಿಶ್ವಾಸ ಕೂಡಾ ಸರ್ಕಾರ ಕಳೆದುಕೊಂಡಿದೆ ಎಂದರು.
ಸಿಎಂ ಸಿದ್ದರಾಮಯ್ಯ ಮೊಸಳೆ ಕಣ್ಣೀರು
ರೈತರಿಗೆ ನೋಟಿಸ್ ನೀಡಿರುವುದು ಹಾಗೂ ವಕ್ಫ್ ಆಸ್ತಿ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ವಿಚಾರಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸದಿರು. ರಾಜ್ಯದಲ್ಲಿ ಹಿಂದೂ ರೈತರ ಜಮೀನು ಕಸಿಯುವುದು ಒಂದು ಕಡೆಯಾದರೆ ಮತ್ತೊಂದು ಕಡೆ ದೇವಸ್ಥಾನಗಳ, ಮಠ ಮಾನ್ಯಗಳ ಜಮೀನುಗಳನ್ನು ಸಹ ಕಬಳಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಮೊಸಳೆ ಕಣ್ಣಿರು ಹಾಕುತ್ತಿದ್ದಾರೆ. ತಾಖತ್ ಇದ್ರೆ ಗೆಜೆಟ್ ನೋಟಿಪಿಕೇಷನ್ ಮೊದಲು ಕ್ಯಾನ್ಸಲ್ ಮಾಡಿ ಎಂದು ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ.
ರಾಜ್ಯದಲ್ಲಿ ಸದ್ಯ ಉಪ ಚುನಾವಣೆ ನಡೆಯುತ್ತಿದೆ. ಇಂತಹ ಹೊತ್ತಿನಲ್ಲಿಯೇ ರೈತರಿಗೆ ಅನ್ಯಾಯವಾಗುತ್ತಿದೆ. ಸಚಿವ ಜಮೀರ್ ಮಾಡುವ ಕೆಲಸ ಏನೂ, ಗೂಂಡಾ ವರ್ತನೆ ತೋರಿದ್ದಾರೆ. ಸಚಿವ ಜಮೀರ್ ಅವರನ್ನು ಗಡಿಪಾರು ಮಾಡಿ ರಾಜ್ಯಕ್ಕೆ ಒಳಿತಾಗುತ್ತದೆ ಎಂದು ಅವರು ಪುನರುಚ್ಚರಿಸಿದರು.
ರಾಜ್ಯದ ಜನರ ಜಾಗಗಳನ್ನು, ಆಸ್ತಿಯನ್ನು ಕಸಿಯುವ ಕೆಲಸ ವಕ್ಫ್ ಮಂಡಳಿ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕದಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ರಹಿತ ಆಡಳಿತ ಎಂದು ಬೊಬ್ಬೆ ಹೊಡೆದಿದ್ದಾರೆ. ಅವರ ಬಣ್ಣ ಬಯಲಾಗಿದೆ.
ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ 14 ಮುಡಾ ನಿವೇಶನ ದೋಚಿದೆ. ಮಂತ್ರಿಗಳ ಆಪ್ತ ಹಾಗೂ ಮೂಡಾ ಕಮಿಷನರ್ ಓಡಿ ಹೋಗಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಏನಾಗಿದೆ 187 ಕೋಟಿ ಲೂಟಿ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತ್ನಾಡುವ ಯೋಗ್ಯತೆ ಸಿದ್ದರಾಮಯ್ಯ ಅವರಿಗಿಲ್ಲ, ಮೋದಿ ನಾಯಕತ್ವ ವಿಶ್ವ ಒಪ್ಪಿದೆ, ಅವರ ಬಗ್ಗೆ ಮಾತಾಡುವ ಯೋಗ್ಯತೆ ಇಲ್ಲ, ಬಾಯಿ ಮುಚ್ಕೊಂಡ್ ಇದ್ರೆ ಒಳ್ಳೆಯದು ಎಂದು ತಿಳಿಸಿದರು.












Click it and Unblock the Notifications