• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾರು ಅಪಘಾತ: ಹಿರಿಯ ಐಎಎಸ್ ಅಧಿಕಾರಿಗೆ ಗಾಯ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಮೇ 10: ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌. ಕೆ. ಅತೀಕ್ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಐಎಎಸ್ ಅಧಿಕಾರಿ ಎಲ್‌. ಕೆ. ಅತೀಕ್ 1991 ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿ ಕಡೆಗೆ ಪ್ರಯಾಣಿಸುತ್ತಿದ್ದ ಅಧಿಕಾರಿಯ ಕಾರು, ಚಿತ್ರದುರ್ಗ ಹೊರವಲಯದ ಮಾದಾರ ಚೆನ್ನಯ್ಯ ಸ್ವಾಮೀಜಿ ಮಠದ ಸಮೀಪ ಮುಂದೆ ಚಲಿಸುತ್ತಿದ್ದ ಲಾರಿಯ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಐಎಎಸ್ ಅಧಿಕಾರಿ ಹತೀಕ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಲಾರಿ ಮಠದ ಎದುರು ಬಲಕ್ಕೆ ತಿರುಗುವ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾದ ಪರಿಣಾಮವಾಗಿ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಾಘಾತ ಘಟನೆ ನಡೆದಿದೆ.

English summary
Senior IAS Rural Development Officer is injured of a car collision with moving truck in Chitradurga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X