ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು
ಚಿತ್ರದುರ್ಗ, ಜನವರಿ, 31: ಚಲಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಅಸುನೀಗಿದ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ಡೆದಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಸಮೀಪದ ಈ ಅವಘಡ ಸಂಭವಿಸಿದೆ. ಮೃತರನ್ನು ಚಳ್ಳಕೆರೆಯ ವೆಂಕಟೇಶ( 57 ), ಚಿತ್ರಯ್ಯನಟ್ಟಿ ವೆಂಕಟೇಶ್ (55 ) ಎಂದು ಗುರುತಿಸಲಾಗಿದೆ. ಇನ್ನು ಕಿಶೋರ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದ ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಟಿವಿ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಭೀಕರ ಕಾರು ಅಪಘಾತ, ನಾಲ್ವರು ಸಾವು
ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂರು ಕಂದಮ್ಮಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸಿಂಧುಶ್ರೀ (2), 5 ತಿಂಗಳ ಕೂಸು ಅಯ್ಯಾಳಪ್ಪ, 3 ತಿಂಗಳ ರಕ್ಷಾ ಹಾಗೂ 25 ವರ್ಷದ ಲಿಂಗಪ್ಪ ಮೃತಪಟ್ಟಿದ್ದಾರೆ. ಇನ್ನು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರೆಲ್ಲರೂ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಳ್ಳಿಯ ನಿವಾಸಿಗಳು ಎಂದು ತಿಳಿದುಬಂದಿದೆ. ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಅಪಘಾತ ನಡೆದಿದ್ದು, ಘಟನಾ ಸ್ಥಳಕ್ಕೆ ಸಾಣಿಕೆರೆ ಪೊಲೀಸ್ ಠಾಣೆಯ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಣಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿತ್ತು.












Click it and Unblock the Notifications